28.5 C
Bengaluru
Monday, January 20, 2020

ಶಾಲೆ ಬಾವಿಗೆ ವಿಷ ಸೇರಿಸಿದ ಶಂಕೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಬೆಳ್ತಂಗಡಿ: ಶಿಬಾಜೆ ಗ್ರಾಮದ ಪೆರ್ಲ ಸರ್ಕಾರಿ ಶಾಲೆ ಆವರಣದೊಳಗಿರುವ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಸೋಮವಾರ ಈ ಬಾವಿಯ ನೀರನ್ನು ಕುಡಿದ ಎಂಟು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾವಿಯಿಂದ ಸೋಮವಾರ ಬೆಳಗ್ಗೆ ಶಾಲಾ ವಿದ್ಯಾರ್ಥಿ ನಾಯಕ ಸುದೀಶ್ ನೀರನ್ನು ಸೇದಿದ ನಂತರ ಕುಡಿದಿದ್ದ. ನಂತರ ಇತರ ಕೆಲವು ವಿದ್ಯಾರ್ಥಿಗಳೂ ನೀರು ಕುಡಿದಿದ್ದರು. ಕೆಲವೇ ಹೊತ್ತಿನಲ್ಲಿ ಬೆನ್ನುಬೆನ್ನಿಗೆ ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ವಾಕರಿಕೆ ಆರಂಭವಾಗಿದ್ದನ್ನು ಗಮನಿಸಿದ ಶಿಕ್ಷಕರು ಆತಂಕಗೊಂಡಿದ್ದರು. ವಿಷಯ ತಿಳಿಯುತ್ತಲೇ ಸಾರ್ವಜನಿಕರು ಶಾಲೆಗೆ ಬಂದಿದ್ದು, ಅಸ್ವಸ್ಥಗೊಂಡ ನಾಲ್ವರು ಬಾಲಕರನ್ನು ಕೊಕ್ಕಡದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿಗೆ ಆಂಬುಲೆನ್ಸ್ ಮೂಲಕ ಕಳಿಸಿಕೊಡಲಾಯಿತು. ಅದೇ ನೀರನ್ನು ಕುಡಿದು ಅಸ್ವಸ್ಥಗೊಂಡ ಇತರ ನಾಲ್ಕು ಮಕ್ಕಳನ್ನೂ ನಂತರ ಆಸ್ಪತ್ರೆಗೆ ದಾಖಲಿಸಲಾಯಿತು.

ಎಂಟನೇ ತರಗತಿಯ ಸುದೀಶ್, ರಾಜೇಶ್, ರಾಧಾಕೃಷ್ಣ, ಯೋಗೀಶ್, 7ನೇ ತರಗತಿಯ ಚೇತನ್, ಮೋನಿಷ್, 6ನೇ ತರಗತಿಯ ಸುದೀಪ್, ಶ್ರವಣ್ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು. ಮಂಗಳೂರಿನ ಜಿಲ್ಲಾಸ್ಪತ್ರೆ ವೆನ್ಲಾಕ್ ಮತ್ತು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಶಿಕ್ಷಕರು ತಿಳಿಸಿದ್ದಾರೆ.

ಶಾಲೆಗೆ ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಶಿಕ್ಷಣಾಧಿಕಾರಿ ಲೋಕೇಶ್, ಅಕ್ಷರ ದಾಸೋಹದ ಸುರೇಶ್, ಶಿಕ್ಷಣ ಸಂಯೋಜಕ ಜಾಧವ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಕರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದಾರೆ.
ಎಸ್‌ಡಿಎಂಸಿ ಅಧ್ಯಕ್ಷ ವೆಂಕಪ್ಪ ಗೌಡ, ಶಿಬಾಜೆ ಗ್ರಾಪಂ ಅಧ್ಯಕ್ಷೆ ಸುಶೀಲ, ಸದಸ್ಯರಾದ ರಮೇಶ್ ಗೌಡ ಕುರುಂಜ, ಪೈಲಿ, ಗಂಗೆ, ಊರ ಪ್ರಮುಖರಾದ ಕೃಷ್ಣಪ್ಪ ಗೌಡ ಬೇಂಗಳ, ಪುರಂದರ ರಾವ್ ಊರ್ತಾಜೆ, ಪ್ರೇಮಚಂದ್ರ ರಾವ್, ರತೀಶ್ ಗೌಡ ಶಿಬಾಜೆ ಮತ್ತಿತರರಿದ್ದರು.

ಬಾವಿ ಬಳಿ ಕ್ಯಾನ್ ಪತ್ತೆ: ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಬಳಿಕ ಬಾವಿ ನೀರನ್ನು ಪರಿಶೀಲಿಸಿದಾಗ, ಕೆಟ್ಟ ವಾಸನೆ ಬರುತ್ತಿರುವುದು ಕಂಡುಬಂದಿದೆ. ಬಾವಿಯ ಸಮೀಪ ಹಳದಿ ಬಣ್ಣದ ಕ್ಯಾನ್ ಮುಚ್ಚಳ ಸಹಿತ ದೊರೆತಿದ್ದು, ನೀರಿಗೆ ವಿಷ ಬೆರೆಸಿರುವ ಅನುಮಾನ ಮೂಡಿದೆ. ಈ ಸಂದರ್ಭ ಸ್ಥಳದಲ್ಲಿ ಸೇರಿದ ಮಕ್ಕಳ ಹೆತ್ತವರು, ಪೋಷಕರು, ಮನೆಯವರು, ಎಳೆ ಮಕ್ಕಳ ಜೀವನದ ಮೇಲೆ ದಾಳಿ ನಡೆಸಲು ಮುಂದಾಗಿರುವವರನ್ನು ಕೂಡಲೇ ಪತ್ತೆ ಮಾಡಿ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಪತ್ತೆ ಮಾಡುತ್ತೇವೆ. ಶಾಲೆಯಲ್ಲಿ ಈ ಹಿಂದೆಯೂ ಕುಡಿಯುವ ನೀರಿನ ಪೈಪ್‌ಗಳನ್ನು ಹಲವು ಬಾರಿ ಒಡೆದು ಹಾಕಿರುವ ಪ್ರಕರಣಗಳ ದೂರುಗಳು ಬಂದಿವೆ. ಪೂರಕ ಮಾಹಿತಿ ಇದ್ದರೆ ಗ್ರಾಮಸ್ಥರು ನೀಡಬೇಕು, ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದರು. ಶಾಲೆ ಆವರಣದಲ್ಲಿ ದುಷ್ಕೃತ್ಯಗಳು ನಡೆಯುತ್ತಿರುವುದರಿಂದ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಸೂಚಿಸಿದರು.

ಪ್ರಯೋಗಾಲಯಕ್ಕೆ ರವಾನೆ: ಧರ್ಮಸ್ಥಳ ಪೊಲೀಸ್ ಉಪ ನಿರೀಕ್ಷಕ ಓಡಿಯಪ್ಪ ಗೌಡ ಘಟನಾ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದರು. ಬಾವಿ ನೀರನ್ನು ಆರು ಬಾಟಲಿಗಳಿಗೆ ತುಂಬಿಸಿ ಜೊತೆಯಲ್ಲಿ ಸಿಕ್ಕಿದ ಖಾಲಿ ಕ್ಯಾನನ್ನೂ ಪರೀಕ್ಷೆಗಾಗಿ ಕಳಿಸಲಾಗುವುದು. ಇದರ ಪರೀಕ್ಷೆಯ ಫಲಿತಾಂಶ ಬರುವವರೆಗೆ ಬಾವಿಯ ನೀರನ್ನು ಬಳಸಬಾರದು ಎಂದು ಶಿಕ್ಷಕರಿಗೆ ಸೂಚಿಸಿದರು. ಪತ್ತೆಯಾಗಿರುವ ಖಾಲಿ ಕ್ಯಾನ್ ಮತ್ತು ಆರು ಬಾಟಲಿಗಳಲ್ಲಿ ನೀರು ಸಂಗ್ರಹಿಸಿದ ಪೊಲೀಸರು ಪ್ರಯೋಗಾಲಯಕ್ಕೆ ರವಾನಿಸಿದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...