More

    ಕುಡಿವ ನೀರಿನ ಟ್ಯಾಂಕ್​ಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು! ಭಾರಿ ದುರಂತ ತಪ್ಪಿಸಿದ ವಾಸನೆ

    ಮೈಸೂರು: ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್​ಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಘಟನೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ.

    ನೀರು ವಾಸನೆ ಬಂದಿದ್ದರಿಂದ ಗ್ರಾಮಸ್ಥರು ಅನುಮಾನಗೊಂಡು ನೀರನ್ನು ಬಳಕೆ ಮಾಡದ ಪರಿಣಾಮ ಎಚ್ಚೆತ್ತ ಬಾರಿ ಅನಾಹುತ ತಪ್ಪಿದೆ. ಈ ನೀರು ಕುಡಿದ ಸಾಕುಪ್ರಾಣಿಗಳು ಅಸ್ವಸ್ಥಗೊಂಡಿವೆ. ಕುಡಿವ ನೀರಿಗೆ ಕ್ರಿಮಿನಾಶಕ ಹಾಕಿದ ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

    ಕುಡಿವ ನೀರಿನ ಟ್ಯಾಂಕ್​ಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು! ಭಾರಿ ದುರಂತ ತಪ್ಪಿಸಿದ ವಾಸನೆಈ ವಿಚಾರ ತಿಳಿಯುತ್ತಿದ್ದಂತೆ ತಾಪಂ ಇಒ ಶ್ರೀನಿವಾಸ್ ಮತ್ತು ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರಿನ ಟ್ಯಾಂಕ್​ಗೆ ಭತ್ತದ ಗದ್ದೆಗೆ ಸಿಂಪಡಿಸುವ ಕ್ರಿಮಿನಾಶಕ ಔಷಧ ಹಾಕಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮವನ್ನೇ ಸ್ಮಶಾನ ಮಾಡಲು ಹೊರಟಿದ್ದ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಗ್ರಾಮಸ್ಥರಿಗೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ.

    ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

    VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

    ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

    ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts