More

    ರಾಜ್ಯದೆಲ್ಲೆಡೆ ನಾಳೆ ಪೊಲೀಸ್ ಸರ್ಪಗಾವಲು!

    ಬೆಂಗಳೂರು: ರಾಜ್ಯದೆಲ್ಲೆಡೆ ಬುಧವಾರ (ಆ.5)​ ಪೊಲೀಸ್​ ಸರ್ಪಗಾವಲು ಇರಲಿದೆ. ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿಯಾಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್​ ಪಡೆ ಸಜ್ಜಾಗಿದೆ.

    ಹೌದು, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾಳೆ(ಆ.5) ಭೂಮಿ ಪೂಜೆ ನಡೆಯಲಿದ್ದು, ಆ ವೇಳೆ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಐಜಿಪಿಗಳು ಮತ್ತು ಎಸ್​ಪಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ ಡಿಜಿಐಜಿಪಿ ಪ್ರವೀಣ್ ಸೂದ್ ಮತ್ತು ಎಡಿಜಿಪಿ(ಕಾನೂನು ಸುವ್ಯವಸ್ಥೆ) ಅಮರ್ ಕುಮಾರ್ ಪಾಂಡೆ ಅವರು ಬೆಂಗಳೂರು ಸೇರಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣ ಅತಿ ಸೂಕ್ಷ್ಮ ವಿಚಾರ. ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆಯುವ ದಿನ ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ. ಮೆರವಣಿಗೆ, ವಿಜಯೋತ್ಸವ, ಪ್ರತಿಭಟನೆಗೆ ಅನುಮತಿ ಇಲ್ಲ ಎಂದಿರುವ ಡಿಜಿಐಜಿಪಿ ಮತ್ತು ಮತ್ತು ಎಡಿಜಿಪಿ, ಮತ್ತಷ್ಟು ಸೂಚನೆಗಳನ್ನು ನೀಡಿದ್ದಾರೆ. ಅದರ ಕಂಪ್ಲೀಟ್​ ಡಿಟೇಲ್ಸ್​ ಇಲ್ಲಿದೆ.

    ಇಲ್ಲಿದೆ ಓದಿರಿ ಬೆಂಗಳೂರಲ್ಲಿ ವಿದೇಶಿಗರಿದ್ದ 35 ಮನೆಗಳ ಮೇಲೆ ರಾತ್ರೋರಾತ್ರಿ ಸಿಸಿಬಿ ರೇಡ್​… ಬೆಚ್ಚಿ ಬೀಳಿಸುತ್ತೆ ಅಲ್ಲಿನ ಅಕ್ರಮ

    ಆ.5ರಂದು ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳು, ಜನನಿಬಿಡ ಪ್ರದೇಶ, ಮಾಲ್, ದೇವಸ್ಥಾನ, ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ. ಮತೀಯ ಸಂಘಟನೆಗಳು, ಸಿಎಎ ಹಾಗೂ ಎನ್​ಆರ್​ಸಿ ಹೋರಾಟಗಾರರು, ಹಿಂದೂಪರ ಸಂಘಟನೆ ಮತ್ತು ಹಿಂದೂಯೇತರ ಸಂಘಟನೆಗಳ ಮೇಲೆ ಪೊಲೀಸ್​ ಕಣ್ಗಾವಲು ಇರಲಿದೆ. ಕಮ್ಯುನಲ್ ಸೆನ್ಸಿಟೀವ್ ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸಲಾಗುತ್ತದೆ. ಕೋಮು ಸೌಹಾರ್ಧತೆಗೆ ಧಕ್ಕೆ ತರುವವರು ಕಂಡುಬಂದ್ರೆ ಅವರನ್ನು ಪ್ರಿವೆಂಟೀವ್ ಸೆಕ್ಷನ್ ಅಡಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.

    ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಿ ಭದ್ರತೆ ಕೈಗೊಳ್ಳುವ ಸಾಧ್ಯತೆ ಇದೆ. ಡಿಎಆರ್ ಮತ್ತು ಕೆಎಸ್ಆರ್​ಪಿ ತುಕಡಿಗಳು ರಸ್ತೆಗಿಳಿಯಲಿದ್ದು, ಬಿಗಿಬಂದೋಬಸ್ತ್ ಕೈಗೊಳ್ಳಲಾಗುತ್ತೆ.

    ಒಟ್ಟಾರೆ ಈ ಎಲ್ಲ ಕ್ರಮಗಳ ಮೂಲಕ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ.

    ಶ್ರೀರಾಮ ಮಂದಿರ ಭೂಮಿ ಪೂಜೆ ರಾಷ್ಟ್ರೀಯ ಏಕತೆಯ ಹಬ್ಬವಾಗಲಿ ಎಂದ ಕಾಂಗ್ರೆಸ್ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts