ಡ್ರಾಪ್​ ಕೊಡುವುದಾಗಿ ಕರೆದೊಯ್ದು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ..

rape pic
Published on

ಚಿಕ್ಕಮಗಳೂರು: ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ಹೋಗಿ ಮಾರ್ಗಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸರು ಆರೋಪಿ ದೇವರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಡ್ರಾಪ್​ ಕೊಡುವುದಾಗಿ ಹೇಳಿ ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ಹೋಗಿ ಮಾರ್ಗಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಗೋಣಿಬೀಡು ಪೊಲೀಸರು ಆರೋಪಿ ಹಾಗೂ ವಿದ್ಯಾರ್ಥಿನಿ ಪರಸ್ಪರ ಪರಿಚಿತರೇ? ಎಂಬುದು ಸೇರಿದಂತೆ ಇನ್ನಷ್ಟು ವಿವರಗಳ ಕುರಿತಂತೆ ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net