ಯುವತಿ ಮೇಲೆ ಗ್ಯಾಂಗ್ ರೇಪ್​; ರಾಷ್ಟ್ರಮಟ್ಟದ ನಾಲ್ವರು ಈಜುಪಟುಗಳ ಬಂಧನ..

Swimmers
Published on

ಬೆಂಗಳೂರು: ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ನಾಲ್ವರನ್ನು ಬೆಂಗಳೂರಿನ ಸಂಜಯನಗರದ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ದೆಹಲಿ ಮೂಲದ ರಜತ್, ಶಿವ್ ರಾಣಾ, ದೇವ್ ಸರೋಯಿ, ಯೋಗೇಶ್ ಕುಮಾರ್ ಬಂಧಿತ ಆರೋಪಿಗಳು. ಇವರು ಮಾ. 24ರಂದು ಗ್ಯಾಂಗ್​ ರೇಪ್ ಮಾಡಿದ್ದರು.

ಬೆಂಗಳೂರಿನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿ ಗ್ಯಾಂಗ್​ರೇಪ್ ಸಂತ್ರಸ್ತೆ. ಈಕೆಯನ್ನು ಆರೋಪಿ ರಜತ್ ಮಾ. 24ರಂದು ರೆಸ್ಟೋರೆಂಟ್​ಗೆ ಕರೆದುಕೊಂಡು ಹೋಗಿದ್ದ. ಬಳಿಕ ತಡರಾತ್ರಿ ಆದ ಕಾರಣ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ರೂಮ್​ಗೆ ಕರೆದೊಯ್ದಿದ್ದ.

ರೂಮ್​ಗೆ ಕರೆದೊಯ್ದ ಬಳಿಕ ಅಲ್ಲಿ ನಾಲ್ವರು ಯುವತಿಗೆ ಬೆದರಿಸಿ ಸರಣಿ ಅತ್ಯಾಚಾರ ನಡೆಸಿದ್ದು, ಈ ಕುರಿತು ಸಂತ್ರಸ್ತೆ ಸಂಜಯನಗರ ಪೊಲೀಸರಿಗೆ ದೂರು ನೀಡಿದ್ದಳು. ಆರೋಪಿಗಳು ರಾಷ್ಟ್ರಮಟ್ಟದ ಈಜುಪಟುಗಳಾಗಿದ್ದು, ಅಭ್ಯಾಸಕ್ಕೆಂದು ಬೆಂಗಳೂರಿಗೆ ಬಂದು ವಾಸವಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net