More

    ಬಾಂಬ್​ ಬೆದರಿಕೆ ಪ್ರಕರಣ; ರಾಜಭವನಕ್ಕೆ ಬಂದಿದ್ದು ಹುಸಿ ಕರೆ ಎಂದು ಸ್ಪಷ್ಟನೆ ನೀಡಿದ ಪೊಲೀಸರು

    ಬೆಂಗಳೂರು: ರಾಜಭವನದಲ್ಲಿ ಬಾಂಬ್​ ಇರಿಸಿರುವುದಾಗಿ ಬೆದರಿಕೆ ಕುರಿತು ಶೋಧ ನಡೆಸಿ ಸ್ಪಷ್ಟನೆ ನೀಡಿರುವ ಪೊಲೀಸ್​ ಅಧಿಕಾರಿಗಳು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.

    ಸೋಮವಾರ ತಡರಾತ್ರಿ ದೊಮ್ಮಲೂರಿನಲ್ಲಿರುವ ರಾಷ್ಟ್ರೀಯ ತನಿಖಾ ದಳ (NIA) ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೋರ್ವ ರಾಜಭಾವನದಲ್ಲಿ ಬಾಂಬ್​ ಇರಿಸಿರುವುದಾಗಿ ಬೆದರಿಸಿದ್ದ. ಕೂಡಲೇ ಮಾಹಿತಿ ಪಡೆದ ಅಧಿಕಾರಿಗಳು ರಾಜಭವನ್ಕಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದ್ದರು.

    ಇದನ್ನೂ ಓದಿ: ಬಿಗ್​ಬಾಸ್​​ ಸ್ಪರ್ಧಿ ವಿನಯ್​ ಅವರಿಂದ ಅನುಭವಿಸಿರೋ ನೋವು ಅಷ್ಟಿಷ್ಟಲ್ಲಾ; ಗಂಭೀರ ಆರೋಪ ಮಾಡಿದ ಕಿರುತೆರೆ ನಟಿ

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ರಾಜಭವನದಲ್ಲಿ ಯಾವುದೇ ರೀತಿಯ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಪರಿಶೀಲನೆ ನಂತರ ಇದೊಂದು ಹುಸಿ ಕರೆ ಎಂದು ತಿಳಿದು ಬಂದಿದ್ದು, ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಇದೇ ರೀತಿಯ ಬಾಂಬ್ ಬೆದರಿಕೆ ಕರೆ ಬೆಂಗಳೂರಿನಾದ್ಯಂತ ಸುಮಾರು 44 ಶಾಲೆಗಳಿಗೆ ಅನಾಮಧೇಯ ಇಮೇಲ್‌ಗಳ ಮೂಲಕ ಬಂದಿತ್ತು. ಈ ಘಟನೆ ನಡೆದು 10 ದಿನಗಳು ಕೂಡ ಕಳೆದಿಲ್ಲ, ಅಷ್ಟರೊಳಗೆ ಇದೇ ರೀತಿಯ ಮತ್ತೊಂದು ಬೆದರಿಕೆ ಕರೆ ಮುನ್ನೆಲೆಗೆ ಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts