ಬೆಂಗಳೂರಲ್ಲಿ ಬೃಹತ್ ಪ್ರಮಾಣದಲ್ಲಿ ಅಮಲು ಪದಾರ್ಥ ಪತ್ತೆ! ಇಬ್ಬರ ಬಂಧನ…

ganja
Published on

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿಒಂದಲ್ಲ ಎರಡಲ್ಲಾ… ಕ್ವಿಂಟಾಲ್ ಗಟ್ಟಲೆ ಗಾಂಜಾ ಇರುವ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಆ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಿದಾಗ ಸಿಕ್ಕ ಪ್ರಮಾಣದ ಗಾಂಜಾ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.

ಡಿಜೆ ಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು 2.47 ಕೋಟಿ ಮೌಲ್ಯದ ಗಾಂಜಾ  415 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಅವರು ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನೂ ಬಂಧಿಸಿದ್ದಾರೆ.

ಬಂಧಿತರು  ನವಾಜ್ ಹಾಗೂ ಅಬ್ದುಲ್ ರೆಹಮಾನ್ ಹೆಸರಿನ ಆರೋಪಿಗಳಾಗಿದ್ದು ಆಂಧ್ರಪ್ರದೇಶದಿಂದ ಗಾಂಜಾ ತಂದು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶೇಖರಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಹರಿದಾಡಿದ್ದು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆರೋಪಿಗಳ ಬಂಧಿಸಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net