ಬಾಗಿಲು ಮುಚ್ಚಿದ ಚೆಕ್‌ಪೋಸ್ಟ್

ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ನಾಯಕವಾಡಿ ಸಮೀಪ ತ್ರಾಸಿ-ಗಂಗೊಳ್ಳಿ ಮುಖ್ಯರಸ್ತೆಯಲ್ಲಿ ಪ್ರಾರಂಭಿಸಲಾಗಿದ್ದ ಗಂಗೊಳ್ಳಿ ಪೊಲೀಸ್ ಠಾಣೆಯ ಚೆಕ್‌ಪೋಸ್ಟ್ ಬಾಗಿಲು ಮುಚ್ಚಿದೆ. ಗಂಗೊಳ್ಳಿಯಲ್ಲಿ 2014ರಲ್ಲಿ ನಡೆದ ಕೋಮುಗಲಭೆ ಹಾಗೂ ಬೆಂಕಿ ಪ್ರಕರಣದ ಬಳಿಕ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ 2015ರಲ್ಲಿ ಗುಜ್ಜಾಡಿ ಗ್ರಾಮದ ನಾಯಕವಾಡಿ ಸಮೀಪ ಪೊಲೀಸ್ ಚೆಕ್‌ಪೋಸ್ಟ್ ಪ್ರಾರಂಭಿಸಲಾಗಿತ್ತು. ಅಂದಿನ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಬ್ಬಣ್ಣ ಚೆಕ್‌ಪೋಸ್ಟ್‌ನಲ್ಲಿ ಸಿಸಿ ಟಿವಿ ಅಳವಡಿಕೆ, ವಿದ್ಯುತ್ ಸಂಪರ್ಕ ಸಹಿತ ಪೊಲೀಸ್ ಸಿಬ್ಬಂದಿಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ನಡೆಸಿದ್ದರು. ಚೆಕ್‌ಪೋಸ್ಟ್‌ನಲ್ಲಿ … Continue reading ಬಾಗಿಲು ಮುಚ್ಚಿದ ಚೆಕ್‌ಪೋಸ್ಟ್