

ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಕೋಮು ಪ್ರಚೋದನಾಕಾರಿ ಹೇಳಿಕೆ, ಅವಹೇಳನ ಸಂದೇಶ ಹಾಕುವ ಸಾರ್ವಜನಿಕರಿಗೆ ನಗರ ಪೊಲೀಸ್ ಕಮಿಷನರ್ ಕಡಕ್ ಎಚ್ಚರಿಕೆ ನೀಡಿದ್ದಾರೆ.
ೇಸ್ಬುಕ್, ಇನ್‌ಸ್ಟಾಗ್ರಾಂ, ವಾಟ್ಸಪ್ ಗ್ರೂಪ್‌ಗಳು ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು, ಸುಳ್ಳು, ತಪ್ಪು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹಂಚುವ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡು ಬಂದಿದೆ. ಕೆಲವರು ಈ ಜಾಲತಾಣಗಳನ್ನು ದುರುಪಯೋಗಪಡಿಸಿ ಸಮುದಾಯಗಳ ನಡುವೆ ಅಸಮಾಧಾನ ಉಂಟು ಮಾಡಲು ಸುಳ್ಳು ಸುದ್ದಿ ಹರಡಲು ಮತ್ತು ಇತರರನ್ನು ಬೆದರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಗಂಭೀರ ಕಾನೂನು ಉಲ್ಲಂಘನೆಯಾಗಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ. ಕಳೆದ ಒಂದು ವಾರದಲ್ಲಿ ಸಾಮಾಜಿಕ ಜಾಲತಾಣ ಅವಹೇಳನ ಬಗ್ಗೆ 30ಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳ ತನಿಖೆಗೆ ಸೆನ್‌ಕ್ರೈಂ ಪೊಲೀಸ್ ಠಾಣೆಯ ಎಸಿಪಿ ನೇತೃತ್ವದ ತಂಡವನ್ನು ನಿಯೋಜಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಕಲಿ ಪ್ರೊೈಲ್‌ಗಳು ಅಥವಾ ವಿದೇಶದಲ್ಲಿ ನೋಂದಾಯಿತ ಖಾತೆಗಳನ್ನು ಬಳಸುವುದರಿಂದ ಅವರ ಬಗ್ಗೆ ಮಾಹಿತಿ ಸೋರಿಕೆಯಾಗುವುದಿಲ್ಲ ಎನ್ನುವ ಸಂಪೂರ್ಣ ತಪ್ಪು ಭಾವನೆಯಿದೆ. ಸಾಮಾಜಿಕ ಜಾಲತಾಣ ಕಂಪನಿಗಳ ಸಂಪರ್ಕ, ರಾಷ್ಟ್ರೀಯ ಸಂಸ್ಥೆಗಳು ಮತ್ತು ಅಂತರಾಷ್ಟ್ರೀಯ ಸಹಕಾರ ಚಾನೆಲ್‌ಗಳೊಂದಿಗೆ ಆರೋಪಿಗಳನ್ನು ಪತ್ತೆಹಚ್ಚಲು ತನಿಖಾ ತಂಡ ಕೆಲಸ ಮಾಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವಕರು ಸೈಬರ್ ಅಪರಾಧಗಳನ್ನು ಮಾಡಲು ಹೋಗಿ ಭವಿಷ್ಯ ಹಾಳು ಮಾಡಬೇಡಿ. ಇದರಿಂದ ಸರ್ಕಾರಿ, ಕಾರ್ಪೊರೇಟ್ ಕಂಪನಿಗಳಲ್ಲಿ ಉದ್ಯೋಗಾವಕಾಶ, ವಿದೇಶಿ ಉದ್ಯೋಗಾವಕಾಶವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದವರು ತಿಳಿಸಿದ್ದಾರೆ.