

ಚಿಕ್ಕಬಳ್ಳಾಪುರ: ಪೊಲೀಸ್ ಕಾನ್ಸ್ಟೆಬಲ್ವೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಹೆಂಡತಿ ಸಾವಿಗೀಡಾದರೆ, ಗಂಡ ಚಿಂತಾಜನಕ ಪರಿಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರದ ಅಣಕನೂರು ಗ್ರಾಮದಲ್ಲಿ ಪೊಲೀಸ್ ಕಾನ್ಸ್ಟೆಬಲ್ ಸುರೇಂದ್ರ ಹಾಗೂ ಅವರ ಪತ್ನಿ ಸ್ನೇಹ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಯತ್ನದಲ್ಲಿ ಪತ್ನಿ ಸಾವಿಗೀಡಾಗಿದ್ದು, ಪತಿ ಚಿಂತಾಜನಕ ಸ್ಥಿತಿಗೆ ತಲುಪಿದ್ದು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಸುರೇಂದ್ರ ಕಾನ್ಸ್ಟೆಬಲ್ ಆಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ ಎನ್ನಲಾಗುತ್ತಿದ್ದರೂ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ಹೊರಬೀಳಬೇಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.