ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೊಲೀಸ್ ಪೇದೆ ಬಂಧನ, ಕರ್ತವ್ಯದಿಂದ ಅಮಾನತು

pic new
Published on

ಥಾಣೆ: 17 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಪೇದೆಯನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ಪ್ರದೇಶದಲ್ಲಿ ನಡೆದಿದೆ.

ಡೊಂಬಿವ್ಲಿ ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಪೇದೆಯನ್ನು ಬಂಧಿಸಿ ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಆಗಸ್ಟ್ 19 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತೆ ಮತ್ತು ಆರೋಪಿ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಈ ನಡುವೆ ಆರೋಪಿ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಈ ಸಂಬಂಧ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸೆಕ್ಷನ್ 354 ಮತ್ತು ಪೋಕ್ಸೋ ಅಡಿಯಲ್ಲಿ ಪೊಲೀಸರು ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net