ಪೊಲೀಸ್​ ವಸತಿ ಗೃಹದ ನೀರಿನ ಸಂಪಿಗೆ ಬಿದ್ದು ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

Constable
Published on

ರಾಮನಗರ: ನೀರಿನ ಸಂಪಿಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.

ರವಿ ಬಿರಾದಾರ್(30) ಮೃತ ಕಾನ್ಸ್​ಟೇಬಲ್​. ಬಿಜಾಪುರ ಮೂಲದ ರವಿ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್​ ಆಗಿದ್ದರು. ಇದೀಗ ಗ್ರಾಮಾಂತರ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪೊಲೀಸ್ ವಸತಿಗೃಹದ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿ ಎರಡು ವರ್ಷದ ಹಿಂದಷ್ಟೆ ಸಂಚಾರಿ ಪೊಲೀಸ್ ಕಾನ್ಸ್​ಟೇಬಲ್​ ಆಗಿ ನೇಮಕಗೊಂಡಿದ್ದರು. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net