

ಬೆಂಗಳೂರು: ಕಳೆದ ವರ್ಷ ನಡೆದ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದ ಪ್ರಕರಣದಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಒಟ್ಟು 61 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಕಾನ್ಸ್ಟೇಬಲ್ಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
2020ರ ನವೆಂಬರ್ನಲ್ಲಿ ಕಾನ್ಸ್ಟೇಬಲ್ ಪರೀಕ್ಷೆ ನಡೆದಿತ್ತು. ಅದರಲ್ಲಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಹೆಸರಿನಲ್ಲಿ ಬೇರೆ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದಾಗಿ ವರದಿಯಾಗಿತ್ತು. ಈ ಬಗ್ಗೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಲ್ಲಿ 11 ಪ್ರಕರಣ, ಬೆಳಗಾವಿಯಲ್ಲಿ 5 ಪ್ರಕರಣ ಸೇರಿದಂತೆ ಒಟ್ಟು 21 ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ವರ್ಗಾಹಿಸಿತ್ತು.
ತನಿಖೆ ನಡೆಸಿರುವ ಸಿಐಡಿ ಪೊಲೀಸರು ಗೋಕಾಕ್ನ ಲಕ್ಷ್ಮಣ್ ಉತ್ತಪ್ಪ ಬಂಡಿ, ಭೀಮಪ್ಪ ಮಹಾದೇವ, ಲಕ್ಷ್ಮಣ ಮುತ್ತಪ್ಪ, ಸೇರಿದಂತೆ 61 ಆರೋಪಿಗಳ ಬಂಧಿಸಿದ್ದಾರೆ. ಅಭ್ಯರ್ಥಿಗಳ ಹೆಸರಿನಲ್ಲಿ ಪರೀಕ್ಷೆ ಬರೆದಿದ್ದ ಐವರು ಕಾನ್ಸ್ಟೇಬಲ್ಗಳನ್ನು ರಾಜ್ಯ ಸರ್ಕಾರ ಕೆಲಸದಿಂದ ವಜಾ ಮಾಡಿದೆ. 21 ಅಭ್ಯರ್ಥಿಗಳು ಶಾಶ್ವತವಾಗಿ ಯಾವುದೇ ಪರೀಕ್ಷೆ ಬರೆಯದಂತೆ ಡಿಬಾರ್ ಮಾಡಲಾಗಿದೆ.
ಬಂಧಿತ ಆರೋಪಿಗಳು ಅಸಲಿ ಅಭ್ಯರ್ಥಿಯ ಆಧಾರ್ ಕಾರ್ಡ್ನಲ್ಲಿ ನಕಲಿ ಅಭ್ಯರ್ಥಿಗಳ ಪೋಟೋ ಬದಲಾಯಿಸುತ್ತಿದ್ದರು. ಗೋಕಾಕ್ನ ಪೋಟೋ ಸ್ಟುಡಿಯೋವೊಂದರಲ್ಲಿ ಈ ಕೆಲಸ ಮಾಡಲಾಗುತ್ತಿತ್ತು. ಅಲ್ಲಿ ಪರೀಕ್ಷೆಯ ನಕಲಿ ದಾಖಲೆ ಸೃಷ್ಟಿಸಿರೋದು ಪತ್ತೆಯಾಗಿದೆ ಎನ್ನಲಾಗಿದೆ. ಬಂಧಿತರಿಂದ 1.54 ಲಕ್ಷ ರೂಪಾಯಿ ನಗದು, ಎರಡು ಕಾರು, ಹಾರ್ಡ್ ಡಿಸ್ಕ್ ಮತ್ತು ಮೊಬೈಲ್ ಪೋನ್ಗಳನ್ನು ಜಪ್ತಿ ಮಾಡಲಾಗಿದೆ.