ಸುಳ್ಯದಲ್ಲಿ ಕಾಲ್ನಡಿಗೆ ಜಾಥಾ: ಪೊಲೀಸ್ ಇಲಾಖೆಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ

New Project (9)
Published on

ಸುಳ್ಯ: ಇಲ್ಲಿನ ಪೊಲೀಸ್ ವೃತ್ತನಿರೀಕ್ಷಕರ ಕಚೇರಿ ಹಾಗೂ ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಪೊಲೀಸ್ ಠಾಣಾ ವತಿಯಿಂದ ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನ ಆಚರಿಸಲಾಯಿತು

ಮಾದಕ ವಸ್ತುಗಳ ಸೇವನೆ ಹಾಗೂ ಅದರಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಸಂ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿ ಅಧ್ಯಾಪಕರ ನೇತೃತ್ವದಲ್ಲಿ ಸುಳ್ಯದ ಜ್ಯೋತಿ ಸರ್ಕಲ್‌ನಿಂದ ಗಾಂಧಿನಗರದ ವರೆಗೆ ನಗರದಲ್ಲಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು.

ನಿವೃತ್ತ ಪ್ರಾಂಶುಪಾಲ ಪ್ರೊ.ದಾಮೋದರ ಗೌಡ ಚಾಲನೆ ನೀಡಿದರು. ಸುಳ್ಯ ವೃತ್ತನಿರೀಕ್ಷಕ ತಿಮ್ಮಪ್ಪ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಠಾಣಾ ಆರಕ್ಷಕ ಉಪನಿರೀಕ್ಷಕ ಸಂತೋಷ್, ಸರಸ್ವತಿ, ಬೆಳ್ಳಾರೆ ಆರಕ್ಷಕ ಉಪ ನಿರೀಕ್ಷಕ ಈರಯ್ಯ ದೂಂತೂರು, ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್, ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಕೆ.ಎಸ್.ಉಮ್ಮರ್, ಶೀಲಾ ಅರುಣ ಕುರುಂಜಿ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಪ್ರಮುಖರಾದ ಕುಸುಮಾಧರ ಎ.ಟಿ., ಚೆನ್ನಕೇಶವ ಜಾಲ್ಸೂರು, ಪ್ರಭಾಕರನ್ ನಾಯರ್ ಸಿ.ಎಚ್., ಐಟಿಐ ಕಾಲೇಜು ಪ್ರಾಂಶುಪಾಲ ಚಿದಾನಂದ ಬಾಳಿಲ, ದಿನೇಶ್ ಮಡ್ತಿಲ, ಭಾಸ್ಕರ ಕೇನಾಜೆ, ರೋಟರಿ ಕ್ಲಬ್ ಅಧ್ಯಕ್ಷ ಡಾ.ರಾಮ್‌ಮೋಹನ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net