More

    ಗೃಹಸಚಿವ ಅಮಿತ್​ ಷಾ ಪ್ರತಿಕೃತಿ ದಹನ ಮಾಡುವ ಪ್ರಯತ್ನ: ಸಿಪಿಐ ಸದಸ್ಯರನ್ನು ವಶಕ್ಕೆ ಪಡೆದ ಪೊಲೀಸರು

    ಹೈದರಾಬಾದ್​: ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿ ಇಂದು ಹೈದರಾಬಾದ್​ನಲ್ಲಿ ಹೋರಾಟ ನಡೆಸಲಾಗುತ್ತಿದೆ. ಸಿಪಿಐ ನಡೆಸುತ್ತಿರುವ ಹೋರಾಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪ್ರತಿಕೃತಿ ದಹನ ಮಾಡುವ ಪ್ರಯತ್ನ ನಡೆಸಲಾಗಿದೆ. ಈ ವೇಳೆ ಪೊಲೀಸರು ಕೆಲ ಸಿಪಿಐ ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.

    ದೆಹಲಿಯಲ್ಲಿ ಸಿಎಎ ಮತ್ತು ಎನ್​ಆರ್​ಸಿ ಪರ ವಿರೋಧ ಹೋರಾಟ ಹಿಂಸಾತ್ಮಕ ಹಾದಿ ತುಳಿದಿದೆ. ಇದರಿಂದಾಗಿ ಮುಖ್ಯ ಪೇದೆ, ಗುಪ್ತಚರ ದಳದ ಅಧಿಕಾರಿ ಸೇರಿದಂತೆ ಒಟ್ಟು 34 ಜನರು ಮೃತರಾಗಿದ್ದಾರೆ. 200ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಅನೇಕ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ದೂಷಿಸಿವೆ. ನಿನ್ನೆ ಸಭೆ ನಡೆಸಿದ ಕಾಂಗ್ರೆಸ್​ ಮುಖಂಡರು, ಅಮಿತ್​ ಷಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಅಮಿತ್​ ಷಾ ಅವರ ರಾಜೀನಾಮೆಗೆ ಕಾಂಗ್ರೆಸ್​ ಒತ್ತಾಯಿಸಿರುವ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಹೋರಾಟದ ಕಿಚ್ಚು ಹತ್ತಿದ್ದು ಗೃಹ ಸಚಿವರ ರಾಜೀನಾಮೆಗೆ ಒತ್ತಾಯ ಮಾಡಲಾಗುತ್ತಿದೆ.

    ಇಂದು ಬೆಳಗ್ಗೆಯಿಂದ ಹೈದರಾಬಾದ್​ನಲ್ಲಿ ಅಮಿತ್​ ಷಾ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದ್ದು, ಅವರ ಪ್ರತಿಕೃತಿಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪೊಲೀಸರು ಸಿಪಿಐನ ಕೆಲವು ಸದಸ್ಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts