12 ವರ್ಷಗಳಿಂದ ಇನ್ಶೂರೆನ್ಸ್ ಇಲ್ಲದ ವಾಹನದಲ್ಲಿ ಪೊಲೀಸರ ಡ್ಯೂಟಿ; ಸ್ಥಳೀಯ ವ್ಯಕ್ತಿ ಅಧಿಕಾರಿಯನ್ನೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ!

ಕುಂದಾಪುರ: ಪೊಲೀಸರ ಕೈಗೆ ಸಾರ್ವಜನಿಕರು ದಂಡ ಕಟ್ಟುವಂತಾಗುವುದು ಸಹಜ. ಆದರೆ ಇಲ್ಲೊಂದು ಕಡೆ ಪೊಲೀಸ್ ಅಧಿಕಾರಿಯೇ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಫಜೀತಿ ಅನುಭವಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆ ಮಾಡಿ ದಂಡ ವಿಧಿಸುತ್ತಿದ್ದ ಪೊಲೀಸ್ ಅಧಿಕಾರಿಯೇ ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡುಬಂದಿದ್ದು, ಸಾರ್ವಜನಿಕರ ಪ್ರಶ್ನೆಗೆ ಆ ಅಧಿಕಾರಿ ಕಕ್ಕಾಬಿಕ್ಕಿ ಆಗುವಂತಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಈ ಪ್ರಕರಣ ನಡೆದಿದೆ. ನಡುರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ, ಸಾರ್ವಜನಿಕರಿಗೆ ದಂಡ ವಿಧಿಸುತ್ತಿದ್ದ ಪೊಲೀಸ್ ಅಧಿಕಾರಿಯನ್ನೇ ವಾಹನ ಸವಾರರೊಬ್ಬರು ವಾಹನದ ದಾಖಲೆ ಕೊಡುವಂತೆ … Continue reading 12 ವರ್ಷಗಳಿಂದ ಇನ್ಶೂರೆನ್ಸ್ ಇಲ್ಲದ ವಾಹನದಲ್ಲಿ ಪೊಲೀಸರ ಡ್ಯೂಟಿ; ಸ್ಥಳೀಯ ವ್ಯಕ್ತಿ ಅಧಿಕಾರಿಯನ್ನೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ!