

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಗಾಡಿಯನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ತೊಂದರೆ ಮಾಡಿದ್ದಲ್ಲದೆ, ಹಿಡಿಯಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ಕೊಲೆಯತ್ನ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಕೇರಳ ಮೂಲದ ಅಬ್ದುಲ್ಲಾ (40) ಚಾಲಕನಾಗಿದ್ದ, ಈಚರ್ ವಾಹನದಲ್ಲಿ 12 ಜಾನುವಾರಗಳನ್ನು ಸಾಗಿಸಲಾಗುತ್ತಿತ್ತು. ವಾಹನದಲ್ಲಿ ಇನ್ನೊಬ್ಬ ವ್ಯಕ್ತಿ ಇದ್ದು, ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ, ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು. ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.
ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮುಂದಾದ ಸಂದರ್ಭ ಗುಂಟೇಡು ಹೊಡೆಯಲಾಗಿದೆ. ಗಾಯಗೊಂಡಾತನ ಜೀವಕ್ಕೆ ಯಾವುದೇ ಹಾನಿಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈತನ ಮೇಲೆ ಬಳ್ಳಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ ಕಡೆಯಿಂದ ಜಾನುವಾರು ತರುತ್ತಿದ್ದುದು ತನಿಖೆಯಿಂದ ಬೆಳಕಿಗೆ ಬಂದಿದೆ.
| ಅರುಣ್
ಪೊಲೀಸ್ ವರಿಷ್ಠಾಧಿಕಾರಿ