More

    ಅಘ್ಘನ್ ವಿದ್ಯಾರ್ಥಿಗಳಿಗೆ ಪೊಲೀಸರಿಂದ ಅಭಯ

    ಮಂಗಳೂರು: ವಿಶ್ವವಿದ್ಯಾಲಯ ಸೇರಿದಂತೆ ನಗರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಆತಂಕವನ್ನು ಆಲಿಸಿದ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಅವರಿಗೆ ಸುರಕ್ಷೆಯ ಭರವಸೆ ನೀಡಿದ್ದಾರೆ.

    ಮಂಗಳೂರು ವಿಶ್ವವಿದ್ಯಾಲಯ, ನಿಟ್ಟೆ ವಿದ್ಯಾ ಸಂಸ್ಥೆ ಹಾಗೂ ಸಂತ ಅಲೋಶಿಯಸ್ ಕಾಲೇಜುಗಳಲ್ಲಿ ಅಫ್ಘನ್‌ನ ಒಟ್ಟು 58 ವಿದ್ಯಾರ್ಥಿಗಳು (ಪದವಿ, ಸ್ನಾತಕೋತ್ತರ, ಪಿಎಚ್‌ಡಿ) ಅಧ್ಯಯನ ಮಾಡುತ್ತಿದ್ದಾರೆ. ಅವರ ಜತೆಗೆ ಕೆಲವರ ಕುಟುಂಬ ಸದಸ್ಯರೂ ಇಲ್ಲೇ ವಾಸವಾಗಿದ್ದಾರೆ.

    ಅಫ್ಘಾನಿಸ್ತಾನದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಕುಟುಂಬದವರ ಬಗ್ಗೆ ಆತಂಕಕ್ಕೀಡಾಗಿರುವ ವಿದ್ಯಾರ್ಥಿಗಳು ಹಾಗೂ ಅವರ ಮನೆಯವರು ಶನಿವಾರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದರು. ಕೆಲವು ವಿದ್ಯಾರ್ಥಿಗಳ ವೀಸಾ ಅವಧಿ ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳುತ್ತಿದ್ದು, ಅದನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದರು.

    ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 58 ವಿದ್ಯಾರ್ಥಿಗಳಲ್ಲಿ 11 ಮಂದಿ ಅಘ್ಘನ್‌ಗೆ ತೆರಳಿದ್ದು, ಅವರೀಗ ಪರೀಕ್ಷೆಗಾಗಿ ಆಗಮಿಸಲು ಅವಕಾಶಕ್ಕಾಗಿ ಕೋರಿಕೆ ಸಲ್ಲಿಸಿದ್ದಾರೆ. ಇಲ್ಲಿ ಅಧ್ಯಯನ ಪೂರ್ಣಗೊಳಿಸಿರುವ ಕೆಲವರ ವೀಸಾ ಮುಗಿಯುತ್ತಿದೆ. ತಮ್ಮ ದೇಶದ ಬೆಳವಣಿಗೆಗಳ ಬಗ್ಗೆ ಆತಂಕಕ್ಕೀಡಾಗಿರುವ ಅವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಲಾಗುವುದು ಎಂದು ಆಯುಕ್ತ ಶಶಿಕುಮಾರ್ ತಿಳಿಸಿದರು.

    15 ವರ್ಷಗಳಿಂದೀಚೆಗೆ ಅಘ್ಘನ್‌ನ ಹಲವು ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಆಗಮಿಸುತ್ತಿದ್ದಾರೆ. ಭಾರತದ ಬಗ್ಗೆ ನಮಗೆ ಅಪಾರ ಗೌರವವಿದೆ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದಾಗಿ ಅಲ್ಲಿರುವ ನಮ್ಮ ಕುಟುಂಬಗಳ ಬಗ್ಗೆ ಆತಂಕಿತರಾಗಿದ್ದೇವೆ. ಪೊಲೀಸ್ ಇಲಾಖೆಯಿಂದ ನಮಗೆ ಸುರಕ್ಷೆಯ ಭರವಸೆ ದೊರಕಿದೆ.
    – ನಾಸಿರ್ ಅಹ್ಮದ್, ಅಘ್ಘನ್ ವಿದ್ಯಾರ್ಥಿಗಳ ಒಕ್ಕೂಟದ ಪ್ರಮುಖ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts