More

    ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; ಪೊಲೀಸ್​ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ

    ಬೆಂಗಳೂರು: ರಾಜಾಜಿನಗರದ ಶಿವನಗರ ನಿವಾಸಿ ಯೋಗೇಶ್ (20)​ ಅತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಯುವಕನ Aತ್ಮಹತ್ಯೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; ಪೊಲೀಸ್​ ತನಿಖೆಯಲ್ಲಿ ಅಸಲಿ ಸತ್ಯ ಬಯಲಾಗಿದೆ. ಮಗನ ಕುಡಿತದ ಚಟ ಬಿಡಿಸಲಾಗದೆ ತಂದೆಯೇ ಆತನನ್ನು ಹತ್ಯೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯೋಗೇಶ್​ ಮದ್ಯವ್ಯಸನಿಯಾಗಿದ್ದನು. ಮಗನ ಕುಡಿತದ ಚಟದಿಂದ ಬೇಸತ್ತು ಹೋಗಿದ್ದ ತಂದೆ ಪ್ರಕಾಶ್​ ಆತನಿಗೆ ಬುದ್ದಿವಾದ ಹೇಳಿದ್ದರು. ಇದೇ ವಿಚಾರಕ್ಕೆ ತಂದೆ ಹಾಗೂ ಮಗನ ನಡುವೆ ಹಲವು ಭಾರೀ ಗಲಾಟೆಯಾಗಿತ್ತು ಎಂದು ತಿಳಿದು ಬಂದಿದೆ.

    ಮಾರ್ಚ್​ 06ರಂದು ತಂದೆ ಹಾಗೂ ಮಗನ ನಡುವೆ ಇದೇ ವಿಚಾರಕ್ಕೆ ಪುನಃ ಗಲಾಟೆಯಾಗಿದ್ದು, ಸಿಟ್ಟಿನಲ್ಲಿ ಪ್ರಕಾಶ್​ ಮಗ ಯೋಗೇಶ್​ನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬಿಂಬಿಸಿದ್ದಾನೆ. ಪ್ರಕಾಶ್​​ನ ನಡೆಯಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರ ಬಳಿ ಶಂಕೆ ವ್ಯಕ್ತಪಡಿಸಿದ್ದು, ಆತ ಸಾಯುವ ಹಿಂದಿನ ಮನೆಯಲ್ಲಿ ಗಲಾಟೆ ಆದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.

    ಇದನ್ನೂ ಓದಿ: ರಾಷ್ಟ್ರೀಯ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ದಿಢೀರ್ ರಾಜೀನಾಮೆ

    ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ ಮೇರೆಗೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಸ್ಥಳ ಮಹಜರು ವೇಳೆ ನೇಣು ಬಿಗಿದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಇರಲಿಲ್ಲ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಬಯಲಾಗಿತ್ತು. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಜಗಳದ ವೇಳೆ ಕೋಪದಲ್ಲಾದ ಎಡವಟ್ಟು ಎಂದು ಪೊಲೀಸರ ಎದರು ಪ್ರಕಾಶ್​ ಹೇಳಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರನಗರ ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts