More

    ಸರ್ಕಾರಿ ಬಸ್‌ ಮೇಲೆ ನಿಂತು ಪುಂಡಾಟ ಮೆರೆದ ನಾಲ್ವರು ಕಾಲೇಜು ವಿದ್ಯಾರ್ಥಿಗಳು; ಪೊಲೀಸರು ವಿಧಿಸಿದ ಶಿಕ್ಷೆಯೇನು ಗೊತ್ತಾ?

    ಚೆನ್ನೈ: ನಗರದ ತ್ಯಾಗರಾಯ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ಬಸ್‌ ಮೇಲೆ ನಿಂತು ಅಜಾಗರೂಕತೆಯಿಂದ ವರ್ತಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

    ಇದನ್ನೂ ಓದಿ: ಪಾಕ್​ಗೆ ತೆರಳಿದ ಭಾರತದ ಅಂಜು ಇನ್ಮುಂದೆ ಫಾತಿಮಾ: ಮತಾಂತರಗೊಂಡು ನಸ್ರುಲ್ಲಾನನ್ನು ಮದ್ವೆಯಾದ ವಿವಾಹಿತೆ!

    ವಿದ್ಯಾರ್ಥಿಗಳು ಎನ್ನೂರು ಮತ್ತು ವಲ್ಲಲಾರ್ ನಗರ ನಡುವೆ ಸಂಚರಿಸುವ ಸರ್ಕಾರಿ ಬಸ್ ಮೇಲೆ ಹತ್ತಿ ಸೆಲ್ಫಿ ತೆಗೆದುಕೊಳ್ಳುವ ಮುಖೇನ ಪುಂಡಾಟ ಮೆರೆದಿದ್ದಾರೆ. ಈ ರೀತಿಯ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿರುವ ದೃಶ್ಯ ಸ್ಥಳೀಯರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಘಟನೆಯ ವೀಡಿಯೋ ಶೀಘ್ರವೇ ಪೊಲೀಸ್​​ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ನಾಲ್ವರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಪುಂಡಾಟವನ್ನು ಪ್ರಶ್ನಿಸಿದ ನಗರ ಪೊಲೀಸರು, ವಿದ್ಯಾರ್ಥಿಗಳಿಗೆ ಬುದ್ಧಿ ಮಾತನ್ನು ಹೇಳಿ, ಭವಿಷ್ಯದಲ್ಲಿ ಇಂತಹ ಅಪಾಯಕಾರಿ ವರ್ತನೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದು ಲಿಖಿತ ರೂಪದಲ್ಲಿ ಕೊಡಿ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಮಲಗಿದ್ದ ಮಗುವಿನ ಬಾಯಿಯೊಳಗೆ ಹೋದ ಹಲ್ಲಿ: ಹೋಗಿದ್ದು ಎರಡು ಪ್ರಾಣ, ಏನಿದು ವಿಚಿತ್ರ ಘಟನೆ..

    ಇಲ್ಲಿಗೆ ಬಿಟ್ಟು ಕಳುಹಿಸದ ಪೊಲೀಸ್ ಅಧಿಕಾರಿಗಳು, ನಾಲ್ವರನ್ನು ಘಟನೆಯ ಸ್ಥಳಕ್ಕೆ ಕರೆದುಕೊಂಡು ಹೋಗಿ, ಟ್ರಾಫಿಕ್​ ನಿಯಂತ್ರಣ ಮಾಡುವುದು ಹೇಗೆ ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿ, ನಂತರ ಅದೇ ರೀತಿ ಮಾಡುವಂತೆ ತಿಳಿಸಿದ್ದಾರೆ. ಈ ರೀತಿ ವಿದ್ಯಾರ್ಥಿಗಳಿಗೆ ಶಿಕ್ಷೆ ವಿಧಿಸಿದ ಪೊಲೀಸರಿಗೆ ಸಾರ್ವಜನಿಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ, (ಏಜೆನ್ಸೀಸ್).

    ಮಳೆಗಾಲದಲ್ಲಿ ಪಾದಗಳಲ್ಲಿ ಸೋಂಕು ಕಾಣಿಸಿಕೊಂಡರೆ ಈ ವಿಧಾನ ಅನುಸರಿಸಿ ನೋಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts