ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಬನಶಂಕರಿ ಬಡಾವಣೆಯ ಶ್ರೀಬನಶಂಕರಿ ದೇವಸ್ಥಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಸಂಯುಕ್ತಾಶ್ರಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ನಾಗರಿಕರ ಸಂಪರ್ಕ ಸಭೆ ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ. ಎಚ್.ವಿ. ಬೆಳಗಲಿ ಮಾತನಾಡಿ, ಶಾಂತಿ ಸುವ್ಯವಸ್ಥೆ ಕಾಪಾಡಲು ನಾಗರಿಕರ ಸಹಕಾರ ಪೊಲೀಸ್ ಇಲಾಖೆಗೆ ಅವಶ್ಯಕ ಎಂದು ತಿಳಿಸಿದರು.
ಅತಿಥಿಗಳಾಗಿದ್ದ ಎಸಿಪಿ ಶಿವಪ್ರಕಾಶ್ ಮಾತನಾಡಿ, ಬಡಾವಣೆ ಅಥವಾ ಎಲ್ಲಿಯಾದರೂ ತಮ್ಮ ಗಮನಕ್ಕೆ ಬರುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳನ್ನು 912 ನಂಬರಿಗೆ ಫೋನ್ ಮಾಡುವ ಮೂಲಕ ತಿಳಿಸಬೇಕೆಂದು ಮನವಿ ಮಾಡಿದರು.
ಪೊಲೀಸ್ ಅಧಿಕಾರಿಗಳಾದ ಶ್ರೀಮಂತ ಪಾಟೀಲ್ ಹಾಗೂ ಬನಶಂಕರಿ ದೇವಸ್ಥಾನದ ಅಧ್ಯಕ್ಷ ರೋಖಡೆ, ವಿ.ವಿ. ಕುರ್ತಕೋಟಿ, ಬಣಕಾರ್ ಉಪಸ್ಥಿತರಿದ್ದರು. ಯಮುನಪ್ಪ ಲಮಾಣಿ ಸ್ವಾಗತಿಸಿದರು.