Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಪೊಲೀಸ್ ಮಾಂಟೆಸ್ಸರಿ ನರ್ಸರಿ ಶಾಲೆ ಆರಂಭ

Friday, 13.07.2018, 3:41 AM       No Comments

ಬೆಳಗಾವಿ: ರಾಜ್ಯದಲ್ಲಿ ಮೊದಲ ಬಾರಿಗೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮಕ್ಕಳಿಗಾಗಿ ‘ಪೊಲೀಸ್ ಮಾಂಟೆಸ್ಸರಿ ನರ್ಸರಿ ಶಾಲೆ’ ನಗರದಲ್ಲಿ ಆರಂಭಗೊಂಡಿದೆ.

ನಗರ ಪೊಲೀಸ್ ಕಮಿಷನರೇಟ್ ಕೇಂದ್ರ ಕಚೇರಿಯ ಆವರಣದಲ್ಲಿ ಪೊಲೀಸ್ ಕಲ್ಯಾಣ ನಿಧಿ ಹಾಗೂ ಖಾಸಗಿ ಕಂಪನಿಗಳ ದೇಣಿಗೆ ಮೂಲಕ ಆರಂಭಗೊಂಡಿರುವ ಶಾಲೆಗೆ ಗುರುವಾರ ನಗರದ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ, ಎಸ್‌ಪಿ ಸುಧೀರಕುಮಾರ ರೆಡ್ಡಿ, ಜಿಪಂ ಸಿಇಒ ರಾಮಚಂದ್ರನ್ ಆರ್., ಡಿಸಿಪಿ ಸೀಮಾ ಲಾಟ್ಕರ್ ಚಾಲನೆ ನೀಡಿದರು.

ನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಮಾತನಾಡಿ, ಬೆಂಗಳೂರಿನ ಕೆಎಸ್‌ಆರ್‌ಪಿ, ಶಿವಮೂಗ್ಗ ಮೊದಲಾದೆಡೆ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಪೊಲೀಸ್ ಮಾಂಟೆಸ್ಸರಿ ನರ್ಸರಿ ಶಾಲೆ ಆರಂಭಿಸಲಾಗಿದೆ. ಆದರೆ, ಕಮಿಷನರೇಟ್ ವ್ಯಾಪ್ತಿಯಲ್ಲಿ ಎಲ್ಲಿ ಈ ಶಾಲೆಗಳನ್ನು ಆರಂಭಿಸಿಲ್ಲ. ಇದೀಗ ಬೆಳಗಾವಿಯಲ್ಲಿ ಮೊದಲ ಬಾರಿಗೆ ಆರಂಭಿಸುತ್ತಿದ್ದೇವೆ ಎಂದರು.

ಪೊಲೀಸ್ ಕಲ್ಯಾಣ ನಿಧಿಯಿಂದ ಶಾಲೆಯನ್ನು ನಿರ್ವಹಣೆ ಮಾಡಲಾಗುವುದು. 3 ರಿಂದ 5 ವರ್ಷ ವಯಸ್ಸಿನ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಲಾಗುತ್ತಿದೆ. ಆರಂಭದ ದಿನಗಳಲ್ಲಿ ಸಾರ್ವಜನಿಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಬಹುದು. 5 ಸಾವಿರ ರೂ. ಶುಲ್ಕ ವಿಧಿಸಲಾಗುತ್ತಿದೆ. ನಮ್ಮ ಸಿಬ್ಬಂದಿ ಈ ಶಾಲೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಗ್ರಾಮೀಣ ಠಾಣೆಗಳ ವ್ಯಾಪ್ತಿಯಲ್ಲಿ ಇಂತಹ ಶಾಲೆಗಳು ಆರಂಭವಾಗಬೇಕು. ನಮ್ಮ ಸಿಬ್ಬಂದಿ ಮಕ್ಕಳಿಗೂ ಪ್ರಾಥಮಿಕ ಹಂತದಲ್ಲಿ ಒಳ್ಳೆಯ ಶಿಕ್ಷಣ ಸೌಲಭ್ಯ ಸಿಗಬೇಕು ಎಂದು ಎಸ್‌ಪಿ ಸುಧೀರಕುಮಾರ ರೆಡ್ಡಿ ತಿಳಿಸಿದರು.

ಈ ಶಾಲೆಗೆ ಆರಂಭದಲ್ಲಿಯೆ 22 ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ. ನುರಿತ ಶಿಕ್ಷಕರನ್ನು ಮತ್ತು ಸಿಬ್ಬಂದಿ ನೇಮಿಸಲಾಗಿದೆ. ಈ ಶಾಲೆಗೆ ಕಿಡೊ ಸಂಸ್ಥೆ ಅತ್ಯುನ್ನತ ದರ್ಜೆಯ ಕ್ರೀಡಾ ಉಪಕರಣಗಳು ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದೆ. ಏಕಸ್ ಕಂಪನಿಯು ಆರ್ಥಿಕ ಸಹಾಯ ಮಾಡಿದೆ.

ಬೆಳಗಾವಿ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತರು ಪೊಲೀಸ್ ಮಾಂಟೆಸ್ಸರಿ ನರ್ಸರಿ ಶಾಲೆ ಆರಂಭಿಸಿದ್ದಾರೆ. ಎಲ್ಲ ಸಿಬ್ಬಂದಿ ಸದುಪಯೋಗ ಪಡಿಸಿಕೊಳ್ಳಬೇಕು. ಮಕ್ಳಳಿಗೆ ಪ್ರಾಥಮಿಕ ಹಂತದಲ್ಲಿ ಗುಣಮಟ್ಟದ ಶಿಕ್ಷಣ ಸೌಲಭ್ಯ ಸಿಗಬೇಕು

> ರಾಮಚಂದ್ರನ್ ಆರ್., ಜಿಪಂ ಸಿಇಒ

Leave a Reply

Your email address will not be published. Required fields are marked *

Back To Top