

ಕಲಬುರಗಿ : ಬಿಜೆಪಿಯ ಮಾಜಿ ಮಹಾನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಅವರಿಗೆ ಪೊಲೀಸರು ವಿನಾಕಾರಣ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹಾಗೂ ಸೆಕ್ಯೂರಿಟಿ ಬಾಂಡ್ ನೀಡುವಂತೆ ಸೂಚಿಸಿರುವುದನ್ನು ಮುಖಂಡ ಶಿವಕಾಂತ ಮಹಾಜನ್ ಬಲವಾಗಿ ಖಂಡಿಸಿದ್ದಾರೆ.
ಸರ್ಕಾರವು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ತಂತ್ರ ಮಾಡುತ್ತಿದೆ. ಇದು ಸರಿಯಾದುದಲ್ಲ. ಕಾನೂನು ಸುವ್ಯವಸ್ಥೆ ನೆಪದಲ್ಲಿ ನೋಟಿಸ್ ನೀಡಲಾಗುತ್ತಿದೆ. ಇಂತಹ ಕ್ರಮವನ್ನು ಪೊಲೀಸ್ ಆಯುಕ್ತರು ಮತ್ತು ಡಿಸಿಪಿಯವರು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರ ಹೀಗೆ ತನ್ನ ತಂತ್ರವನ್ನು ಮುಂದುವರೆಸಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಕೆಲವರನ್ನು ಬೆದರಿಸಿದಂತೆ ಮಾಡಲು ಸುಳ್ಳು ಪೊಲೀಸ್ ವರದಿ ನೀಡುವಂತೆ ಮಾಡುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.