More

    ರಸ್ತೆಯಲ್ಲಿ ನಮಾಜ್​ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದ ಪೊಲೀಸ್​ ಅಧಿಕಾರಿ; ವಿಡಿಯೋ ವೈರಲ್

    ನವದೆಹಲಿ: ರಸ್ತೆಯಲ್ಲೇ ನಮಾಜ್​ ಮಾಡುತ್ತಿದ್ದರು ಎಂಬ ಕಾರಣಕ್ಕೆ ಪೊಲೀಸ್​ ಅಧಿಕಾರಿಯೊಬ್ಬರು ಮುಸ್ಲಿಂ ವ್ಯಕ್ತಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಇಂದರ್​ಲೋಕ್​ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆ ವ್ಯಕ್ತವಾಗುತ್ತಿದೆ.

    ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು, ನಮಾಜ್​ ಮಾಡುತ್ತಿದ್ದ ವ್ಯಕ್ತಿಗಳಿಗೆ ಕಾಲಿನಿಂದ ಒದ್ದು ಪ್ರಾರ್ಥನೆಯ ಮಧ್ಯದಲ್ಲೇ ಮೇಲಕ್ಕೆ ಏಳುವಂತೆ ಸೂಚಿಸುತ್ತಾರೆ. ಈ ವೇಳೆ ಕೆಲವರು ಅಧಿಕಾರಿಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ವಾಗ್ವಾದ ನಡೆದಿದೆ. ಹಲವರು ಅಧಿಕಾರಿಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ದೆಹಲಿ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ವಿಚಾರಣೆ ಮುಗಿದ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು. ಈ ರೀತಿಯ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವ ಮಾತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts