More

    ಸ್ಯಾಂಟ್ರೋ ರವಿ ಪರವಾಗಿ ಸುಳ್ಳು ದೂರು ದಾಖಲಿಸಿದ್ದ ಪೊಲೀಸ್​ ಇನ್ಸ್​ಪೆಕ್ಟರ್​ ಅಮಾನತು

    ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಮತ್ತು ಪೊಲೀಸ್​ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಸ್ಯಾಂಟ್ರೋ ರವಿ ಹೆಸರು ಭಾರೀ ಸದ್ದು ಮಾಡುತ್ತಿದೆ. ಸಚಿವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಈತನ ಹಿನ್ನೆಲೆ ಬಗೆದಷ್ಟು ಆಳ ಎಂಬಂತಾಗಿದೆ. ಒಂದೊಂದೇ ಕರಾಳ ವಿಚಾರ ಬಯಲಾಗುತ್ತಿದ್ದು ಇತ್ತೀಚೆಗೆ ಗೃಹ ಸಚಿವರ ಮನೆಯಲ್ಲಿ ಸ್ಯಾಂಟ್ರೋ ರವಿ ಹಣದ ಗಂಟು ಎಣಿಸುತ್ತಿದ್ದ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಂಬ್​ ಸಿಡಿಸಿದ್ದರು.

    ಇದೀಗ ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ಮೇಲೆ ಸುಳ್ಳು ಆರೋಪ ಹೊರಿಸಿ ಕೇಸ್​ ದಾಖಲು ಮಾಡಿದ್ದ ಪೊಲೀಸ್ ಇನ್ಸ್​ಪೆಕ್ಟರ್​ ಪ್ರವೀಣ್​ನನ್ನು ಅಮಾನತು ಮಾಡುವಂತೆ ರಾಜ್ಯ ಪೊಲೀಸ್​ ಮುಖ್ಯಸ್ಥರೇ ಆದೇಶ ಹೊರಡಿಸಿದ್ದಾರೆ.

    ಪೊಲೀಸ್ ಅಧಿಕಾರಿ ಪ್ರವೀಣ್, ಸ್ಯಾಂಟ್ರೋ ರವಿ ಪರವಾಗಿ, ಇಬ್ಬರು ಮಹಿಳೆಯರ ವಿರುದ್ಧ, ಸುಳ್ಳು ದೂರು ದಾಖಲಿಸಿ ಅವರನ್ನು ಜೈಲು ಸೇರುವಂತೆ ಮಾಡಲು ಸಹಕರಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರವೀಣ್​ನನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ಕುರಿತು ವರದಿಗಳು ಬಂದ ತಕ್ಷಣವೇ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ, ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶಿಸಿದ್ದರು ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts