ಡಿಸಿ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​ ಪೇದೆ; ಇವರಿಗೊಂದು ಸಮಸ್ಯೆ ಇತ್ತು ಎಂದ್ರು ಕಮಿಷನರ್​

Police 6 ay 20
Published on

ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ನಿವಾಸದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ನಿವಾಸದಲ್ಲೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.

ಸಿಟಿ ರಿಸರ್ವ್​ ಪೊಲೀಸ್​ ಪೇದೆ ಪ್ರಕಾಶ್​ ಗುರುವಯ್ಯನವರ್​(30) ಮೃತರು. ಸೆಕ್ಯೂರಿಟಿ ರೂಂನಲ್ಲಿಯೇ ಗಲ್ಲಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪೇದೆ ಆತ್ಮಹತ್ಯೆ ಬಗ್ಗೆ ಬೆಳಗಾವಿ ಪೊಲೀಸ್ ಕಮಿಷನರ್​ ಲೋಕೇಶ್​ಕುಮಾರ್​ ಹೇಳಿಕೆ ನೀಡಿದ್ದು, ಮೃತ ಪ್ರಕಾಶ್​ ಅವರಿಗೆ ಮನೋರೋಗದ ಸಮಸ್ಯೆ ಇತ್ತು. ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಮೊದಲು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 4 ವರ್ಷಗಳ ಹಿಂದೆ ಬೆಳಗಾವಿಗೆ ವರ್ಗವಾಗಿತ್ತು. ಕಳೆದ ಒಂದು ವಾರದ ಹಿಂದೆ ಡಿಸಿ ನಿವಾಸಕ್ಕೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ನಿನ್ನೆ ರಾತ್ರಿ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು ಎಂದಿದ್ದಾರೆ.

ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net