More

    ದುಬಾರಿ ಬೆಲೆಗೆ ದಿನಸಿ ಮಾರಾಟ ಮಾಡುತ್ತಿದ್ದ ಖೂಳರಿಗೆ ಯಾರು ಬಿಸಿ ತಟ್ಟಿಸಿದರು ನೋಡಿ…

    ಬೆಂಗಳೂರು: ಲಾಕ್‌ಡೌನ್ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ದಿನಬಳಕೆ ವಸ್ತುಗಳನ್ನು ನಿಗದಿತ ಬೆಲೆಗಿಂತ (ಎಂಆರ್‌ಪಿ) ಅಧಿಕ ಮೊತ್ತಕ್ಕೆ ಕೆಲವರು ಮಾರುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

    ಇಂತಹ ಲಾಭಕೋರರಿಗೆ ಬುಧವಾರ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ದಿನಸಿ ಪದಾರ್ಥಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ದಿನಸಿ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿನ ಬಳಕೆ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಸೂಚನೆ ಕೊಟ್ಟರೂ ಕೆಲವರು ದುಪ್ಪಟ್ಟು ಬೆಲೆಗೆ ಮಾರುತ್ತಿರುವ ಆರೋಪ ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ನೇತೃತ್ವದ ತಂಡ 120 ದಿನಸಿ ಮಳಿಗೆಗಳ ಮೇಲೆ ದಿಡೀರ್ ದಾಳಿ ನಡೆಸಿ ಪರಿಶೀಲಿಸಿತು.

    ಈ ಸಂದರ್ಭದಲ್ಲಿ ಅಂಗಡಿಯವರು ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿದೆ. ಪ್ರಾಥಮಿಕ ಹಂತದ ಪರಿಶೀಲನೆ ಆಧರಿಸಿ 5 ಮಳಿಗೆಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಈ ಬಗ್ಗೆ ಆಹಾರ ಮತ್ತು ನಾಗರಿಕ ಸೇವೆಗಳ ಪೂರೈಕೆ ಇಲಾಖೆಗೂ ವರದಿ ಸಲ್ಲಿಸಲಾಗಿದೆ. ವರದಿ ಆಧರಿಸಿ ಇನ್ನು ಉಳಿದ ಮಳಿಗೆಗಳ ವಿರುದ್ಧ ಹಂತಹಂತವಾಗಿ ಕಾನೂನು ಕ್ರಮ ಜಾರಿಗೊಳ್ಳಲಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

    ಲಾಕ್‌ಡೌನ್ ಸಂದರ್ಭದಲ್ಲಿ ಆಹಾರದ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಮುಂದಾಗುವ ವ್ಯಾಪಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ದೇಶದ 170 ಕರೊನಾ ಹಾಟ್‌ಸ್ಪಾಟ್‌ಗಳಲ್ಲಿ ಕರ್ನಾಟಕದ ಯಾವ್ಯಾವ ಸ್ಥಳಗಳಿವೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts