More

    ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಪೊಲೀಸರ ಮನವಿ

    ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಅನುಕೂಲಕ್ಕಾಗಿ ನಗರದ ಕೆಂಪೇಗೌಡ ಬಸ್ ನಿಲ್ದಾಣದಿಂದ ಸೋಮವಾರ (ಮೇ ೬) ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿರುವ ಕಾರಣಕ್ಕೆ ಮೆಜೆಸ್ಟಿಕ್ ಸುತ್ತಮುತ್ತ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆಯಿದ್ದು, ವಾಹನ ಸವಾರರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಪೊಲೀಸರು ಸೂಚಿಸಿದ್ದಾರೆ.

    ರಾಜ್ಯದ ೧೪ ಲೋಕಸಭಾ ಕ್ಷೇತ್ರಗಳಿಗೆ ಮೇ ೭ ಚುನಾವಣೆ ನಡೆಯಲಿದ್ದು, ಮತದಾರರಿಗೆ ಮತದಾನಕ್ಕಾಗಿ ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿಯು ಕೆಂಪೇಗೌಡ ಬಸ್ ನಿಲ್ದಾಣದಿಂದ ಸೋಮವಾರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಹೀಗಾಗಿ, ಸಂಜೆ ವೇಳೆಗೆ ಮೆಜೆಸ್ಟಿಕ್ ಸುತ್ತಮುತ್ತ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜೆ.ಸಿ.ರಸ್ತೆ ಮತ್ತು ರಾಜಾರಾಮಮೋಹನ್ ರಾಯ್ ರಸ್ತೆ ಕಡೆಯಿಂದ ಮೈಸೂರು ಬ್ಯಾಂಕ್ ವೃತ್ತದ ಮೂಲಕ ರಾಜಾಜಿನಗರದ ಕಡೆಗೆ ಹೋಗುವ ವಾಹನ ಸವಾರರು ಪ್ಯಾಲೇಸ್ ರಸ್ತೆ, ಚಾಲುಕ್ಯ ಸರ್ಕಲ್, ರೇಸ್‌ಕೋರ್ಸ್ ರಸ್ತೆ ಮಾರ್ಗವಾಗಿ ಸಂಚರಿಸಬೇಕು. ರಾಜಾರಾಮ್ ಮೋಹನರಾಯ್ ರಸ್ತೆಯಿಂದ ಮಾಗಡಿ ರಸ್ತೆ ಕಡೆಗೆ ಹೋಗುವ ವಾಹನಗಳು ಹಡ್ಸನ್ ಸರ್ಕಲ್ ಮಾರ್ಗವಾಗಿ ಕೆ.ಜಿ.ರಸ್ತೆಗೆ ಬರುವ ಬದಲು ಎನ್.ಆರ್.ವೃತ್ತ, ಟೌನ್‌ಹಾಲ್ ವೃತ್ತ, ಸಿಟಿ ಮಾರ್ಕೆಟ್ ಸರ್ಕಲ್, ರಾಯನ್ ಸರ್ಕಲ್, ಸಿರ್ಸಿ ಸರ್ಕಲ್ ಮೂಲಕ ಸಂಚರಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts