25.5 C
Bangalore
Monday, December 16, 2019

ಕರ್ನಾಟಕ ಉದ್ಯಮಿಯ ಮನೆಯಿಂದ ಭರ್ಜರಿ ಮೌಲ್ಯದ ಅಷ್ಟಧಾತು ಶಂಖ ಕದ್ದ ಮಧ್ಯಪ್ರದೇಶದ ಯುವಕರು; ಪೊಲೀಸ್​ ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯ ಇದು…

Latest News

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಲಖನೌಗೆ ಕಾಲಿಟ್ಟ ಪೌರತ್ವ ಪ್ರತಿಭಟನೆ; ಕ್ಲಾಸ್​ ರೂಂನಿಂದ ಹೊರಗೆ ಬಂದು ಪೊಲೀಸರ ಮೇಲೆ ಕಲ್ಲು ಎಸೆದ ನಡ್ವಾ ಕಾಲೇಜು ವಿದ್ಯಾರ್ಥಿಗಳು

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಪ್ರದೇಶ ಮತ್ತು ದೆಹಲಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕೂಡ ಬೀದಿಗಿಳಿದಿದ್ದು ಪೊಲೀಸರು...

ಈ ಡಿಫರೆಂಟ್ ಮ್ಯಾಗಿ ರುಚಿಯನ್ನು ಬಲ್ಲವರೇ ಬಲ್ಲರು, ತಯಾರಿಸೋದೂ ತುಂಬ ಸಿಂಪಲ್!: ಕಲ್ಪನೆಗೂ ನಿಲುಕದ್ದು ಎಂದ್ರು ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ಏನೇನೆಲ್ಲ ವೈರಲ್​ ಆಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಅಡುಗೆ, ಫ್ಯಾಷನ್​ನಿಂದ ಹಿಡಿದು ಪ್ರತಿಯೊಂದೂ ಏನೇನೋ ವಿಭಿನ್ನ, ವಿಶಿಷ್ಟ ಸಂಗತಿಗಳೆಲ್ಲ ಶೇರ್​ ಆಗುತ್ತ ಟ್ರೆಂಡ್...

ಅಲಹಾಬಾದ್​: ಕರ್ನಾಟಕದಿಂದ ಅಪರೂಪದ, ಭಾರಿ ಮೌಲ್ಯದ ಶಂಖವೊಂದನ್ನು ಕದ್ದುಕೊಂಡು ಅದನ್ನು ಮಾರಾಟ ಮಾಡಲು ಪ್ರಯಾಗ್​ರಾಜ್​ಗೆ ತೆರಳುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾರ್ಗಮಧ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಷ್ಟು ದುಬಾರಿ ಶಂಖವನ್ನು ಕದಿಯಲು ಕಾರಣವೇನು ಎಂಬುದನ್ನು ಆರೋಪಿಗಳು ಬಾಯ್ಬಿಟ್ಟಿದ್ದು, ಇಂಟರೆಸ್ಟಿಂಗ್​ ಆಗಿದೆ.

- Advertisement -

ಅಮಿತ್​ ಕುಮಾರ್​ ಶುಕ್ಲಾ ಹಾಗೂ ರಾಹುಲ್ ಕುಮಾರ್​ ಸೋನಿ ಇಬ್ಬರೂ ರೇವಾ ಜಿಲ್ಲೆಯ ಕಠಾರಿ ಗ್ರಾಮದ ನಿವಾಸಿಗಳು. ಇದು ಚೌಹಾಣಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಬರುತ್ತದೆ. ಅದರಲ್ಲಿ ಅಮಿತ್​ ಕುಮಾರ್​ ಶುಕ್ಲಾ ಕರ್ನಾಟಕದ ಶ್ರೀಮಂತ ಉದ್ಯಮಿಯೋರ್ವರ ಮನೆಯಲ್ಲಿ ಕೆಲಸಕ್ಕಿದ್ದ. ಅದೇ ಮನೆಯಿಂದ ಇವರಿಬ್ಬರೂ ಶಂಖವನ್ನು ಎಗರಿಸಿದ್ದಾರೆ.

ಇದೊಂದು ಸಿಕ್ಕಾಪಟೆ ಅಪರೂಪದ, ಮಿಶ್ರಲೋಹಗಳಿಂದ ತಯಾರಿಸಲ್ಪಟ್ಟ ಶಂಖ. ಇದು ಸುಮಾರು 22 ಕೆಜಿಯಷ್ಟಿದೆ. ಪೊಲೀಸರು ಹೇಳುವ ಪ್ರಕಾರ ಮಾರುಕಟ್ಟೆಯಲ್ಲಿ ಸುಮಾರು 25-30 ಲಕ್ಷ ರೂಪಾಯಿ ಬೆಲೆಬಾಳುತ್ತದೆ. ಕರ್ನಾಟಕದ ಉದ್ಯಮಿಯ ಮನೆಯಲ್ಲಿ ಕದ್ದುಕೊಂಡು ಬೈಕ್​ನಲ್ಲಿ ಬರುತ್ತಿದ್ದ ಇವರನ್ನು ಖಚಿತ ಮಾಹಿತಿಮೇರೆಗೆ ಉತ್ತರಪ್ರದೇಶದ ಅಲಹಾಬಾದ್​ ಜಿಲ್ಲೆಯ ಗುರ್​ಪುರ್​ ಗ್ರಾಮದ ಗೌಹಾನಿಯಾ ಸೇತುವೆ ಬಳಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಇದನ್ನು ಪ್ರಯಾಗ್​ರಾಜ್​ನಲ್ಲಿ ಮಾರಲು ಹೊರಟಿದ್ದಾಗಿ ಅವರು ವಿಚಾರಣೆ ವೇಳೆ ತಿಳಿಸಿದ್ದಾರೆ.

ಉದ್ಯಮಿಯ ಮನೆಯಲ್ಲಿ ಕೆಲಸಕ್ಕೆ ಇದ್ದ ಅಮಿತ್​ ಕುಮಾರ್​ ಶುಕ್ಲಾಗೆ ಕಳೆದ ಐದು ತಿಂಗಳಿನಿಂದ ಆತ ಸಂಬಳ ಕೊಟ್ಟಿರಲಿಲ್ಲವಂತೆ. ಹಾಗಾಗಿ ಆ ಶಂಖವನ್ನು ಕದಿಯಬೇಕಾಯಿತು ಎಂದು ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...