More

    ಕ್ರಿಕೆಟಿಗ ಶಮಿ ಪತ್ನಿಗೆ ಪೊಲೀಸ್ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ

    ಕೋಲ್ಕತ: ಕ್ರಿಕೆಟಿಗ ಮೊಹಮದ್ ಶಮಿ ಅವರ ಪತ್ನಿ ಹಾಗೂ ರೂಪದರ್ಶಿ ಹಸಿನ್ ಜಹಾನ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಪಶ್ಚಿಮ ಬಂಗಾಳದ ಪೊಲೀಸರಿಗೆ ಕಲ್ಕತ ಹೈಕೋರ್ಟ್ ಸೂಚನೆ ನೀಡಿದೆ.

    ಹಸಿನ್ ಜಹಾನ್ ಅವರು ಕಳೆದ ಆಗಸ್ಟ್‌ನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸವನ್ನು ಸ್ವಾಗತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಪ್ರಕಟಿಸಿದ್ದರು. ಅದರ ಬೆನ್ನಲ್ಲೇ ಅವರಿಗೆ ಕೊಲೆ, ಅತ್ಯಾಚಾರದ ಬೆದರಿಕೆಗಳು ಬಂದಿದ್ದವು. ಇದರಿಂದಾಗಿ ತನಗೆ ಮತ್ತು ಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಅವರು ಪೊಲೀಸರ ಮೊರೆ ಹೋಗಿದ್ದರು. ಆದರೆ ಅವರ ಬೇಡಿಕೆಯನ್ನು ಈಡೇರಿಸದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದರು. ಇದರಿಂದಾಗಿ ಅವರು, ಸೂಕ್ತ ಭದ್ರತೆ ಒದಗಿಸುವಂತೆ ಕಲ್ಕತ ಹೈಕೋರ್ಟ್ ಮೆಟ್ಟಿಲೇರಿದ್ದರು.

    ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಹಸಿನ್ ಜಹಾನ್ ಆಗಸ್ಟ್ 28ರಂದು ಪೊಲೀಸರಿಗೆ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಈ ಬಗ್ಗೆ ಸರಿಯಾಗಿ ತನಿಖೆ ನಡೆಸಿರಲಿಲ್ಲ. ಇದೀಗ ಕೋರ್ಟ್ ಪ್ರಕರಣದ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡುವಂತೆಯೂ ಪೊಲೀಸರಿಗೆ ಸೂಚಿಸಿದೆ ಎಂದು ಹಸಿನ್ ಜಹಾನ್ ಅವರ ಪರ ವಕೀಲ ಆಶಿಶ್ ಕುಮಾರ್ ಚೌಧರಿ ತಿಳಿಸಿದ್ದಾರೆ.

    ಇದನ್ನೂ ಓದಿ: ಆಸ್ಟ್ರೇಲಿಯಾದ ಸರ್ಫಿಂಗ್ ಕ್ರೀಡಾಪಟು ಈಗ ನೀಲಿಚಿತ್ರ ತಾರೆ!

    ಹಸಿನ್ ಜಹಾನ್ 2014ರಲ್ಲಿ ಶಮಿ ಅವರನ್ನು ವಿವಾಹವಾಗಿದ್ದರು. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 2018ರಲ್ಲಿ ಅವರು ಬೇರ್ಪಟ್ಟಿದ್ದರು. ಕೌಟುಂಬಿಕ ದೌರ್ಜನ್ಯದ ಬಗ್ಗೆ ಹಸಿನ್ ಜಹಾನ್ ದೂರು ಕೂಡ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ. ಶಮಿ ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡುತ್ತಿದ್ದಾರೆ.

    ಕ್ರಿಕೆಟಿಗ ಮೊಹಮದ್ ಶಮಿ ಪತ್ನಿಯಿಂದ ಪೊಲೀಸರ ವಿರುದ್ಧವೇ ದೂರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts