18.5 C
Bangalore
Monday, December 16, 2019

ಶಿವರಾತ್ರಿ ಸಂಭ್ರಮಕ್ಕೆ ಪೊಲೀಸರ ಅಡ್ಡಿ!

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಮಂಗಳೂರ: ಶಿವರಾತ್ರಿಯ ಭಕ್ತಿಪೂರ್ವಕ ಆಚರಣೆಯ ಅಂಗವಾಗಿ ನಗರದ ವಿವಿಧೆಡೆ ಹಮ್ಮಿಕೊಳ್ಳಾಗಿದ್ದ ಯಕ್ಷಗಾನ ಹರಕೆ ಬಯಲಾಟ ಹಾಗೂ ಭಜನಾ ಕಾರ್ಯಕ್ರಮಗಳಿಗೆ ಮಂಗಳೂರು ನಗರ ಪೊಲೀಸರು ಅಡ್ಡಿಯುಂಟು ಮಾಡುವ ಮೂಲಕ ಭಕ್ತರ ಆಕ್ರೋಶಕ್ಕೆ ಕಾರಣರಾದರು.

ಮಂಗಳೂರಿನ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಐದು ದಶಕಕ್ಕೂ ಹೆಚ್ಚು ಕಾಲದಿಂದ ಅಹೋರಾತ್ರಿ ಭಜನೆ ನಡೆಯುತ್ತಿದೆ. ಈ ಬಾರಿಯೂ ಭಜನೆ ಮಾತ್ರವಲ್ಲದೆ ಸಮೀಪದಲ್ಲೇ ಕೊಲ್ಲಂಗಾನ ಮೇಳದವರಿಂದ ಕಾಲಮಿತಿ ಯಕ್ಷಗಾನ ಬಯಲಾಟವನ್ನೂ ಹಮ್ಮಿಕೊಳ್ಳಲಾಗಿತ್ತು. ಭಜನೆ ಸಾಯಂಕಾಲ 6ರಿಂದ ಬೆಳಗ್ಗೆ 6ರ ವರೆಗೆ ನಡೆಯಬೇಕಿತ್ತು.

ಎರಡೂ ಕಾರ್ಯಕ್ರಮ ನಡೆಯುತ್ತಿದ್ದಾಗ ರಾತ್ರಿ 10.30ರ ಸುಮಾರಿಗೆ ಆಗಮಿಸಿದ ಕಾವೂರು ಠಾಣೆ ಪೊಲೀಸರು, ಭಜನೆ ನಿಲ್ಲಿಸುವಂತೆ ಸೂಚಿಸಿದರು. ಇದು ಪ್ರತಿವರ್ಷದ ಆಚರಣೆ, ನಿಲ್ಲಿಸಲಾಗದು ಎಂದು ಸಂಘಟಕರು ಉತ್ತರಿಸಿದರು. ಅಲ್ಲಿಂದ ಯಕ್ಷಗಾನದ ಕಡೆಗೆ ಹೋದ ಪೊಲೀಸರು ಧ್ವನಿವರ್ಧಕದ ಧ್ವನಿಮಟ್ಟವನ್ನು ತೀರಾ ಕಡಿಮೆ ಮಾಡಿದರು.

ಇದರಿಂದ ಸಭಿಕರಿಗೆ ಮಾತ್ರವಲ್ಲ, ಭಾಗವತರಿಗೂ ಸರಿಯಾಗಿ ಕೇಳದೆ ಅವರು ಯಕ್ಷಗಾನ ಸ್ಥಗಿತಗೊಳಿಸಿದರು. ಇದರಿಂದ ಬೇಸತ್ತ ಸಭಿಕರು, ಸ್ಥಳೀಯರು ಸೇರಿ ಪೊಲೀಸರ ಕ್ರಮವನ್ನು ಖಂಡಿಸಿದರು. ಇದೇ ವೇಳೆಗೆ ಪಣಂಬೂರು ಉಪವಿಭಾಗದ ಎಸಿಪಿ ಶ್ರೀನಿವಾಸ ಗೌಡ ಕೂಡ ಬಂದು ಯಕ್ಷಗಾನದ ಹಿನ್ನೆಲೆ ಗೊತ್ತಿಲ್ಲದೆ ಡಿಜೆಗೆ ಹೋಲಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು.

ಸ್ಥಳಕ್ಕಾಗಮಿಸಿದ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ.ಡಾ.ಭರತ್ ಶೆಟ್ಟಿ ಮಧ್ಯಪ್ರವೇಶಿಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸದಂತೆ ಪೊಲೀಸರು ಸೂಚಿಸಿದರು. ಬಳಿಕ ಮೈಕ್ ಶಬ್ದ ಕಡಿಮೆಗೊಳಿಸಿ ಆಟ ಮತ್ತು ಭಜನೆ ಮುಂದುವರಿಯಿತು.

ಸ್ಥಳೀಯರಿಂದ ಪೊಲೀಸ್ ಕಂಟ್ರೋಲ್ ರೂಂಗೆ ಬಂದ ದೂರಿನ ಹಿನ್ನೆಲೆಯಲ್ಲಿ ನಾವು ಬಂದಿದ್ದೇವೆ, ಶಬ್ದ ಮಾಲಿನ್ಯ ಸರಿಯಲ್ಲ, ಹಾಗಾಗಿ ರಾತ್ರಿ ಯಕ್ಷಗಾನ, ಭಜನಾ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಇನ್ನೂ ಎರಡು ಕಡೆ: ನಗರದ ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟೀಲು ಮೇಳದ ಯಕ್ಷಗಾನ ಬಯಲಾಟ ನಡೆಯುತ್ತಿದ್ದು, ಅಲ್ಲಿಗೆ ತೆರಳಿದ ಪೊಲೀಸರು ಧ್ವನಿವರ್ಧಕದ ಶಬ್ದ ಪ್ರಮಾಣ ಇಳಿಸುವಂತೆ ಸೂಚಿಸಿ ಕಿರಿಕಿರಿ ಮಾಡಿದ್ದಾರೆ. ಇದೇ ರೀತಿ ಶಕ್ತಿನಗರದಲ್ಲಿ ನಡೆಯುತ್ತಿದ್ದ ರಾತ್ರಿ ಭಜನೆಯನ್ನೂ ತಡೆಯುವ ಯತ್ನ ಮಾಡಿರುವುದು ಭಜಕರು, ಭಕ್ತರನ್ನು ಕೆರಳಿಸಿದೆ.

ಪೊಲೀಸರ ವಾಸಸ್ಥಳ: ಯಕ್ಷಗಾನ/ಭಜನೆ ನಿಲ್ಲಿಸಲ್ಪಟ್ಟ ಪ್ರದೇಶಗಳು ಮಂಗಳೂರಿನಲ್ಲಿ ಪ್ರಮುಖ ಪೊಲೀಸ್ ಅಧಿಕಾರಿಗಳ ನಿವಾಸಗಳು, ಕ್ವಾರ್ಟರ್ಸ್ ಇರುವ ಕಡೆಗಳಲ್ಲೇ ಇಂತಹ ಅಡಚಣೆ ನಡೆದಿರುವುದು ಗಮನಾರ್ಹ.
ಕಾವೂರಿನ ದೇವಸ್ಥಾನದ ಸ್ವಲ್ಪ ದೂರದಲ್ಲಿ ಪಶ್ಚಿಮ ವಲಯ ಐಜಿಪಿ ಬಂಗಲೆಯಿದ್ದರೆ ಶಕ್ತಿನಗರ ಹಾಗೂ ಪಾಂಡೇಶ್ವರ ಪ್ರದೇಶದಲ್ಲಿ ಪೊಲೀಸರ ವಸತಿ ಗೃಹಗಳಿವೆ. ಅಧಿಕಾರಿಗಳು ಸಿಬ್ಬಂದಿಗೆ ಅಧಿಕ ವಾಲ್ಯೂಮ್‌ನ ಕಾರ್ಯಕ್ರಮಗಳಿಂದ ತೊಂದರೆಯಾಗುತ್ತದೆ ಎಂದು ಈ ಕ್ರಮ ವಹಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಆಯುಕ್ತರ ಜತೆ ಮಾತುಕತೆ ಬಳಿಕ ಮುಂದಿನ ನಿರ್ಧಾರ: ಕಾವೂರು ದೇವಳದಲ್ಲಿ ಶಿವರಾತ್ರಿ ಮಹೋತ್ಸವ ಸಂದರ್ಭ ಭಜನೆ ಹಾಗೂ ಯಕ್ಷಗಾನಕ್ಕೆ ತಡೆಯೊಡ್ಡಿದ ಪೊಲೀಸರು ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹೇಳಿದೆ.

ಘಟನೆಗೆ ಸಂಬಂಧಿಸಿ ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ಹಾಗೂ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖಂಡರೊಂದಿಗೆ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು, ನಂತರ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಶಾಸಕ ಡಾ.ವೈ.ಭರತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ, ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ ಮತ್ತಿತರರಿದ್ದರು.

ಕ್ರಮಕ್ಕೆ ವಿಎಚ್‌ಪಿ ಆಗ್ರಹ: ಕಾವೂರು ಮತ್ತು ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಶಿವರಾತ್ರಿ ಅಂಗವಾಗಿ ಶಾಂತಿಯುತವಾಗಿ ನಡೆಯುತ್ತಿದ್ದ ಭಜನೆ, ಯಕ್ಷಗಾನ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ತಡೆಯೊಡ್ಡಿರುವುದು ಖಂಡನೀಯ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಆಗ್ರಹಿಸಿದೆ. ಪೊಲೀಸರು ತಡೆಯೊಡ್ಡಿರುವ ಘಟನೆಯಿಂದ ಹಿಂದು ಧಾರ್ಮಿಕ ಭಾವನೆಗಳಿಗೆ ಬಹಳಷ್ಟು ನೋವು ತಂದಿದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪೊಲೀಸರಿಗೆ ಸಚಿವ ಖಾದರ್ ತರಾಟೆ: ಉಳ್ಳಾಲ: ಶಿವರಾತ್ರಿ ಎನ್ನುವುದು ಹಿಂದು ಪವಿತ್ರ ಹಾಗೂ ಜಾಗರಣೆ ಮಾಡುವ ಹಬ್ಬ. ಜಾಗರಣೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸಾಮಾನ್ಯ. ಈ ಸಂದರ್ಭ ಶಬ್ದ ಮಾಲಿನ್ಯ ಒಂದು ದಿನಕ್ಕೆ ಸೀಮಿತವಾಗಿದೆ. ಈ ನೆಪದಲ್ಲಿ ಕಾರ್ಯಕ್ರಮ ನಿಲ್ಲಿಸುವ ಮೊದಲು ಉನ್ನತ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಸಂಸ್ಕೃತಿ ಅರಿತು ಜವಾಬ್ದಾರಿಯಿಂದ ಮುನ್ನಡೆಯಬೇಕು ಎಂದು ಸಚಿವ ಯು.ಟಿ.ಖಾದರ್ ಯಕ್ಷಗಾನ ತಡೆಯಲು ಮುಂದಾದ ಪೊಲೀಸರ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಕ್ರಮದ ಬಗ್ಗೆ ತಡರಾತ್ರಿ ಒಂದು ಗಂಟೆಗೆ ಕಾರ್ಪೊರೇಟರ್ ಕರೆ ಮಾಡಿ ತಿಳಿಸಿದ ತಕ್ಷಣ ಅಧಿಕಾರಿಗೆ ಕರೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಬೇಡಿ ಎಂದು ಸೂಚಿಸಿದ್ದೇನೆ. ಸ್ಥಳಕ್ಕೆ ಪೊಲೀಸರನ್ನು ಕಳುಹಿಸಿದವರು ಯಾರು? ಇದರ ಹಿಂದಿರುವ ಉದ್ದೇಶ ಏನು? ಈ ಕುರಿತು ಸಂಪೂರ್ಣ ಮಾಹಿತಿಯುಳ್ಳ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಘಟನೆ ಬಗ್ಗೆ ನನಗೂ ತೀವ್ರ ನೋವಾಗಿದೆ ಎಂದು ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಅನುಮತಿ ಇಲ್ಲದೆ ಕಾವೂರು ಪೊಲೀಸ್ ಇನ್‌ಸ್ಪೆಕ್ಟರ್ ದೇವಸ್ಥಾನಕ್ಕೆ ತೆರಳಿದ್ದಾರೆ. ಅವರಿಂದ ದುರ್ವರ್ತನೆ ನಡೆದಿರುವುದಾಗಿ ದೇವಸ್ಥಾನದವರು ಆರೋಪಿಸಿದ್ದಾರೆ, ಈ ವಿಚಾರವನ್ನು ವಿಚಾರಣೆಗೊಳಪಡಿಸುತ್ತೇವೆ. ಘಟನೆ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ಅವರಿಗೆ ಆದೇಶಿಸಿದ್ದೇನೆ.
-ಸಂದೀಪ್ ಪಾಟೀಲ್, ನಗರ ಪೊಲೀಸ್ ಆಯುಕ್ತ

ಹಿಂದುಗಳ ಆಚರಣೆಗೆ ಅಡ್ಡಿಪಡಿಸುವ ಅಧಿಕಾರಿಗಳ ಇಂಥ ದರ್ಪದ ನೀತಿ ಸಹಿಸಲು ಸಾಧ್ಯವಿಲ್ಲ. ಶಾಂತಿ ಕಾಪಾಡಬೇಕಾದ ಪೊಲೀಸರೇ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ಶಾಂತಿ ಕದಡಲು ಯತ್ನಿಸಿದ್ದಾರೆ. ಮೇಲಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಹಿಂದು ವಿರೋಧಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಯಕ್ಷಗಾನದಂಥ ಪವಿತ್ರ ಕಲೆಯನ್ನು ಅರ್ಧದಲ್ಲಿ ತಡೆದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಅನಿವಾರ್ಯವಾದೀತು.
– ಸಂಸದ ನಳಿನ್‌ಕುಮಾರ್ ಕಟೀಲ್, ಸಂಸದ

ಯಕ್ಷಗಾನ ಎಲ್ಲ ಧರ್ಮದವರು ಪ್ರೀತಿಸುವ ಕಲೆ. ಕಾವೂರು ದೇವಾಲಯದಲ್ಲಿ ಪೊಲೀಸರು ಏಕಾಏಕಿಯಾಗಿ ಬಂದು ಭಜನೆ ಹಾಗೂ ಯಕ್ಷಗಾನಕ್ಕೆ ತಡೆಯೊಡ್ಡಿರುವುದು ಯಕ್ಷಗಾನ ಕಲೆಗೆ ಮಾಡಿದ ಅವಮಾನ. ಪೊಲೀಸರ ನಿಬಂಧನೆಗಳಿದ್ದರೆ ಮೊದಲೇ ತಿಳಿಸಬೇಕಿತ್ತು. ಹಲವು ಕಡೆಗಳಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ನೋವುಂಟಾಗುತ್ತಿದೆ.
– ಸತೀಶ್ ಶೆಟ್ಟಿ ಪಟ್ಲ, ಯಕ್ಷಗಾನ ಭಾಗವತ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...