More

    2.96 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಸ್ತಾಂತರ

    ಹಾವೇರಿ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳ್ಳತನವಾಗಿದ್ದ ಸಾರ್ವಜನಿಕರ ವಸ್ತುಗಳನ್ನು ಪತ್ತೆ ಮಾಡಿದ ಪೊಲೀಸರು ಭಾನುವಾರ ವಾರಸುದಾರರಿಗೆ ವಿತರಿಸಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶಕುಮಾರ ಮಾತನಾಡಿ, ಜಿಲ್ಲೆಯಲ್ಲಿ 2023ನೇ ಸಾಲಿನಲ್ಲಿ ಒಟ್ಟು 557 ಸ್ವತ್ತಿನ ಕಳವು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ 7,89,18,042 ರೂ. ಮೌಲ್ಯದ ಸ್ವತ್ತು ಕಳ್ಳತನವಾಗಿದೆ. ಇದರಲ್ಲಿ 142 ಪ್ರಕರಣಗಳನ್ನು ಪತ್ತೆ ಮಾಡಿ 2,96,74,521 ರೂ. ಮೊತ್ತದ ಸ್ವತ್ತನ್ನು ವಶ ಪಡಿಸಿಕೊಳ್ಳಲಾಗಿದೆ. ಸದರಿ ವಶಪಡಿಸಿಕೊಂಡ ಸ್ವತ್ತನ್ನು ನಿಯಮಾನುಸಾರ ನ್ಯಾಯಾಲಯದಿಂದ ಅನುಮತಿ ಪಡೆದು ಅವುಗಳ ವಾರಸುದಾರರುಗಳಿಗೆ ಹಿಂದಿರುಗಿಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts