ಮಹಿಳಾ ಕೊರಿಯೋಗ್ರಾಫರ್​ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..ಜಾನಿ ಪತ್ನಿ ಆಯೇಷಾ ವಿರುದ್ಧವೂ ಕ್ರಮಕ್ಕೆ ಸಿದ್ಧತೆ!

Jani Master
Published on

police, arrest, janimaster, wife, assault, choreographer

ಹೈದರಾಬಾದ್: ನೃತ್ಯ ನಿರ್ದೇಶಕಿ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ .ಯುವತಿ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾನಿ ಮಾಸ್ಟರ್ ಪತ್ನಿ ಆಯೇಷಾ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಯುವತಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಜಾನಿ ಮಾಸ್ಟರ್ ನನ್ನು ಪೊಲೀಸರು ಗೋವಾದಲ್ಲಿ ಬಂಧಿಸಿ ಹೈದರಾಬಾದ್​ನ ಚಂಚಲ್ ಗುಡಾ ಜೈಲಿಗೆ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ಮತ್ತೊಂದು ಮಹತ್ವದ ತಿರುವು ಪಡೆಯುವ ಸಾಧ್ಯತೆ ಇದೆ.

ನೃತ್ಯ ಸಂಯೋಜಕ ಜಾನಿ ಮಾಸ್ಟರ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಆತನ ಪತ್ನಿ ಆಯೇಷಾ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ನರಸಿಂಗಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net