More

    ಕಾಂಕ್ರೀಟ್​ ಗೋಡೆಯನ್ನೇ ರಸ್ತೆಯಲ್ಲಿ ನಿರ್ಮಿಸಿದ ಪೊಲೀಸರು; ಈ ಪ್ರತಿಭಟನೆಯ ಅಷ್ಟೊಂದು ಹೆದರಿಕೆ ಏಕೆ?

    ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿ ಭಾಗವಾದ ಟಿಕ್ರಿ, ಸಿಂಘು ಹಾಗೂ ಘಾಜಿಪುರದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದಾರೆ. ಆದರೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿರುವ ದೆಹಲಿ ಪೊಲೀಸರು ವಿಶೇಷ ಯೋಜನೆ ಒಂದನ್ನು ರೂಪಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

    ಕನಿಷ್ಠ ಬೆಂಬಲ ಬೆಲೆ (MSP) ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್‌ ಮೋರ್ಚಾ ಮತ್ತು ಕಿಸಾನ್‌ ಮಜ್ದೂರ್‌ ಮೋರ್ಚಾ ಸೇರಿದಂತೆ ಇತರೆ ರೈತ ಸಂಘಟನೆಗಳು ದೆಹಲಿ ಚಲೋಗೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ದೆಹಲಿ ಸುತ್ತಮುತ್ತಲಿನ ರಾಜ್ಯಗಳ ರೈತರು ರಾಷ್ಟ್ರರಾಜಧಾನಿಯತ್ತ ಮುಖ ಮಾಡಿದ್ದಾರೆ.

    ಇದನ್ನೂ ಓದಿ: ಕಾರು ಬಸ್​ ನಡುವೆ ಭೀಕರ ಅಪಘಾತ; ಐದು ಮಂದಿ ಸಜೀವ ದಹನ

    ಇನ್ನು ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿರುವ ಪೊಲೀಸರು ರಾಷ್ಟ್ರ ರಾಜಧಾನಿಗೆ ಪ್ರವೇಶ ಕಲ್ಪಿಸುವ ಪ್ರಮುಖ ಗಡಿ ಭಾಗಗಳನ್ನು ಕಾಂಕ್ರೀಟ್​  ತಡೆಗೋಡೆ ಮತ್ತು ಕಬ್ಬಿಣದ ಮೊಳೆಗಳನ್ನು ರಸ್ತೆಗಳಲ್ಲಿ ಅಳವಡಿಸಲಾಗಿದೆ. ಇದರಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ರೈತರು ಮಾತ್ರವಲ್ಲದೆ ದೆಹಲಿಯತ್ತ ಗಾಡಿಗಳಲ್ಲಿ ಪ್ರಯಾಣಿಸುತ್ತಿರುವವರಿಗೆ ತೊಂದರೆಯಾಗಿದೆ.

    ಈಗಾಗಲೇ ಬಿಡುಗಡೆ ಮಾಡಲಾಗಿರುವ ಸಂಚಾರ ಮಾರ್ಗಸೂಚಿ ಪ್ರಕಾರ, ಸಿಂಘು ಗಡಿಯಲ್ಲಿ ವಾಣಿಜ್ಯ ವಾಹನಗಳ ಸಂಚಾರದ ಮೇಲೆ ಸೋಮವಾರದಿಂದಲೇ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧ ಮಂಗಳವಾರವೂ ಮುಂದುವರೆಯಲಿದ್ದು, ಅಹಿತಕರ ಘಟನೆ ಸಂಭವಿಸದಂತೆ ಸುಮಾರು 5,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts