ಇನ್ಮುಂದೆ ಪೊಲೀಸರು ರೀಲ್ಸ್‌ ಮಾಡುವಂತಿಲ್ಲ: ಇಲಾಖೆಯಿಂದ ಬಂತು ಖಡಕ್‌ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ನೀವು ಏನನ್ನು ನೋಡಬಹುದು ಎಂದು ಹೇಳಲು ಸಾಧ್ಯವಿಲ್ಲ. ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ರೀತಿಯ ವೀಡಿಯೋಗಳು ವೈರಲ್ ಆಗಿದ್ದು, ಇದರಲ್ಲಿ ಫೈಟಿಂಗ್, ಡ್ಯಾನ್ಸ್ ಮತ್ತು ವಿಚಿತ್ರ ಕೃತ್ಯಗಳನ್ನು ಮಾಡುವ ವೀಡಿಯೊಗಳು ಸೇರಿವೆ.  ರೀಲ್ಸ್​​ ಮಾಡಬೇಕು ಹೆಚ್ಚಿನ ಜನರು ವೀಕ್ಷಣೆ ಮಾಡಬೇಕು ಬೇಗನೆ ಜನಪ್ರಿಯತೆ ಪಡೆಯಬೇಕು ಎಂದು ಹಲವರು ಹಂಬಲಿಸುತ್ತಿರುತ್ತಾರೆ. ಹೀಗೆ  ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿ ರೀಲ್ಸ್‌ಗಳನ್ನು ಮಾಡುತ್ತಿದ್ದಾರೆ. ಇದು ಹವ್ಯಾಸ, ಚಟವೋ ಗೊತ್ತಿಲ್ಲ, ಇಂತಹವುಗಳು ಇಲಾಖೆಗೆ ಶೋಭೆ ತರುವಂತದಲ್ಲ. ಸಮವಸ್ತ್ರಕ್ಕೆ ಸಮಾಜದಲ್ಲಿ ಅದರದ್ದೇ ಆದಂತಹ ಗೌರವ ಇದೆ. ಕೆಲವರು ತಮ್ಮ ಅಪಾರವಾದ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಹೀಗಾಗಿ ಸಮವಸ್ತ್ರಗಳನ್ನ ಧರಿಸಿ ಆ ರೀಲ್ಸ್ ಗಳನ್ನ ಮಾಡೋದು ಇಲಾಖೆಗೆ ಸರಿಯಾಗೋದಿಲ್ಲ. ಹೀಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ, ರೀಲ್ಸ್‌ಗಳನ್ನ ಹಾಕುವಂತಿಲ್ಲ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ಯಾವುದೇ ವಿಷಯಗಳ ಕುರಿತು ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೊ, ರೀಲ್ಸ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವಂತಿಲ್ಲ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರನು ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾದ್ಯಮಗಳು ಅಥವಾ ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ.

ಪೊಲೀಸ್ ವೃತ್ತಿಗೆ ಸಂಬಂಧ ಪಡದ ವಿಷಯಗಳ ಕುರಿತು ಪೊಲೀಸ್ ಸಮವಸ್ತ್ರದಲ್ಲಿ ಫೋಟೊಗಳು, ವಿಡಿಯೊ, ರೀಲ್ಸ್ ಇತ್ಯಾದಿಗಳನ್ನು ಹರಿಬಿಡದಂತೆ ಜಾಗೃತಗೊಳಿಸುವಂತೆ ಹಾಗೂ ಯಾವುದೆ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಸೂಚಿಸಿದ್ದಾರೆ.

Share This Article

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…