More

    ಸರ್ವಿಸ್ ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಚುನಾವಣಾ ಕರ್ತವ್ಯದಲ್ಲಿದ್ದ ಸೈನಿಕ ಆತ್ಮಹತ್ಯೆ

    ಗರಿಯಾಬಂದ್: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಧ್ಯಪ್ರದೇಶದ ವಿಶೇಷ ಸಶಸ್ತ್ರ ಪಡೆಯ ಯೋಧನೊಬ್ಬ ತನ್ನ ಸರ್ವಿಸ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: ಎರಡನೇ ಬಾರಿಗೆ ತಂದೆಯಾದ ಕ್ರಿಕೆಟಿಗ ಕೃನಾಲ್ ಪಾಂಡ್ಯ: ಮಗುವಿನ ಹೆಸರು ರಿವೀಲ್..!

    ಮಧ್ಯಪ್ರದೇಶದ ವಿಶೇಷ ಸಶಸ್ತ್ರ ಪಡೆಯ 34ನೇ ಬೆಟಾಲಿಯನ್​ಗೆ ಸೇರಿದ ಹೆಡ್​ ಕಾನ್​ಸ್ಟೆಬಲ್​ ಜಿಯಾಲಾಲ್​ ಪವಾರ್​ ಅವರು ಆತ್ಮಹತ್ಯೆ ಮಾಡಿಕೊಂಡವರು.

    ಗರಿಯಾಬಂದ್ ಮಹಾಸಮುಂಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುತ್ತಿದ್ದಾಗ ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಯೊಂದರಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಸೈನಿಕ ಜಿಯಾಲಾಲ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಸೈನಿಕ ಜಿಯಾಲಾಲ್​ ಅವರು ಚುನಾವಣಾ ಕರ್ತವ್ಯಕ್ಕೆ ಭದ್ರತಾ ಸಿಬ್ಬಂದಿಯ ತಂಡದಲ್ಲಿದ್ದರು. ಆದರೆ ಸಕ್ರಿಯ ಚುನಾವಣಾ ಕಾರ್ಯಕ್ಕೆ ನಿಯೋಜಿಸಿರಲಿಲ್ಲ. ಮೀಸಲು ತಂಡದಲ್ಲಿರಿಸಲಾಗಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಯಾವುದೇ ಡೆತ್​ ನೋಟ್ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಚೆನ್ನೈ: ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ ನಂತರ ಸಾವಿಗೀಡಾದ 26 ವರ್ಷದ ಯುವಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts