

ಪಟ್ನಾ: ಇತ್ತೀಚಿನ ದಿನಗಳಲ್ಲಿ ಮದುವೆಗೆ ಸಂಬಂಧಿಸಿದ ಸುದ್ದಿಗಳು ಒಂದಿಲ್ಲೊಂದು ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ವರ ಚೋಲಿ ಕೆ ಪೀಚೆ ಕ್ಯಾ ಹೈ ಹಾಡಿಗೆ ಹೆಜ್ಜೆ ಹಾಕಿದ ಎಂಬ ಕಾರಣಕ್ಕೆ ಮದುವೆಯನ್ನು ನಿಲ್ಲಿಸಲಾಗಿತ್ತು. ಇನ್ನೂ ಬಂದಿರುವ ಅತಿಥಿಗಳಿಗೆ ಅಡುಗೆ ಕಡಿಮೆ ಮಾಡಿಸಲಾಗಿದೆ ಎಂದು ಆರೋಪಿಸಿ ಮದುವೆಯನ್ನು ರದ್ದುಪಡಿಸಲಾಗಿದೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮದುವೆಯಾದ ಮರುಕ್ಷಣವೇ ಪತ್ನಿಯ ಕಪಾಳಕ್ಕೆ ಹೊಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆಯು ಬಿಹಾರದ ನವಾಡದಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರು ತಾನು ಪ್ರೀತಿಸಿ ಮದುವೆಯಾದ ಯುವತಿಗೆ ಮರುಕ್ಷಣವೇ ಹೊಡೆದಿದ್ದಾರೆ. ಸದ್ಯ ಘಟನೆಯ ವಿಡಿಯೋ ವೈರಲ್ (Video Viral) ಆಗಿದ್ದು, ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Ghar Ke Kalesh ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೋ ಸದ್ಯ ವೈರಲ್ (Video Viral) ಆಗಿದೆ. ನವದಂಪತಿಗಳು ಏನೋ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಸಿಟ್ಟಿಗೆದ್ದ ವರ ಅವಾಚ್ಯ ಶಬ್ದಗಳಿಂದ ವಧುವನ್ನು ನಿಂದಿಸಲು ಶುರು ಮಾಡಿದ್ದು, ದೇವಸ್ಥಾನದಿಂದ ಹೊರಹೋದ ಬಳಿಕ ಆಕೆಯ ಕಪ್ಪಾಳಕ್ಕೆ ಹೊಡೆದು ನಿಂದಿಸಲು ಶುರು ಮಾಡಿದ್ದಾನೆ. ಅಲ್ಲಿದ್ದವರು ವರನಿಗೆ ಬೈಯುತ್ತಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಕೇಳಿ ಬಂದಿರುವ ಮಾಹಿತಿ ಪ್ರಕಾರ, ಒಂದೇ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ಹಾಗೂ ಅದೇ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಪ್ರೀತಿಸಿ ದೇವಸ್ಥಾನದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾದ ಕೆಲ ಕ್ಷಣದ ಬಳಿಕ ಸಚಿನ್ ತನ್ನ ಪತ್ನಿಯ ಕಪಾಳಕ್ಕೆ ಹೊಡೆದಿದ್ದು, ದೊಡ್ಡ ರಂಪಾಟವನ್ನೇ ಮಾಡಿದ್ದಾನೆ. ಈ ಬಗ್ಗೆ ವಧು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ತಪ್ಪಿತಸ್ಥ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.