22.5 C
Bengaluru
Sunday, January 19, 2020

ನೀತಿ ಸಂಹಿತೆ ಉಲ್ಲಂಸಿದರೆ ಕಠಿಣ ಕ್ರಮ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಬೆಳಗಾವಿ: ಉಪ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅದಿಕಾರಿಗಳು ಕಾರ್ಯನಿರ್ವಹಿಸಬೇಕು. ನೀತಿ ಸಂಹಿತೆ ಉಲ್ಲಂಸಿರುವುದು ಕಂಡುಬಂದರೆ ಸಂಬಂಸಿದ ಅದಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾದಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.

ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಕಾದಿರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ ನಡೆದ ಅದಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ರೀತಿಯ ಹೊಸ ಕಾಮಗಾರಿಗಳನ್ನು ಆರಂಭಿಸಬಾರದು, ಹೊಸ ಟೆಂಡರ್ ಪ್ರಕ್ರಿಯೆ ನಡೆಸಬಾರದು. ಒಂದು ವೇಳೆ ಈಗಾಗಲೇ ಕಾಮಗಾರಿ ಆರಂಭಿಸಿದ್ದರೆ ಕೆಲಸ ಮುಂದುವರಿಸಲು ಯಾವುದೇ ತೊಂದರೆಯಿಲ್ಲ. ಅನಗತ್ಯವಾಗಿ ಸಚಿವರು ಅಥವಾ ಜನಪ್ರತಿನಿದಿಗಳ ಭೇಟಿ ಸೇರಿ ಮಾದರಿ ನೀತಿ ಸಂಹಿತೆ ಉಲ್ಲಂಸುವ ರೀತಿಯಲ್ಲಿ ಯಾವುದೇ ರೀತಿಯ ಕಾರ್ಯಚಟುವಟಿಕೆ ಕೈಗೊಳ್ಳಬಾರದು ಎಂದು ಸೂಚನೆ ನೀಡಿದರು.

ರಜೆ ನೀಡದಂತೆ ಸೂಚನೆ: ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಯಾವುದೇ ಅದಿಕಾರಿಗಳು ಅಥವಾ ಕೆಳಹಂತದ ಸಿಬ್ಬಂದಿಗೆ ರಜೆ ನೀಡಬಾರದು. ಅನುಮತಿ ಪಡೆಯದೇ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಟ್ಟು ಹೊರಗಡೆ ತೆರಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆ- ಸಮಾರಂಭ ಅನುಮತಿ ಕಡ್ಡಾಯ: ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಭೆ-ಸಮಾರಂಭಗಳಿಗೆ ಅನುಮತಿ ಕಡ್ಡಾಯವಾಗಿದ್ದು, ಏಕ ಗವಾಕ್ಷಿ ಪದ್ಧತಿಯಲ್ಲಿ ಸಂಘಟಕರಿಗೆ ಪರವಾನಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅದಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರ ವ್ಯಾಪ್ತಿಯಲ್ಲಿ ನಡೆಯುವ ಸಭೆ- ಸಮಾರಂಭಗಳಿಗೆ ಪಾಲಿಕೆ ಆಯುಕ್ತರು ಪರವಾನಗಿ ನೀಡುವರು. ಅದೇ ರೀತಿ ತಾಲೂಕು ಮಟ್ಟದಲ್ಲಿ ತಹಸೀಲ್ದಾರರು ಮತ್ತು ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸಂಬಂಧಪಟ್ಟ ಚುನಾವಣಾದಿಕಾರಿಗಳು ಸಭೆ-ಸಮಾರಂಭ ಮತ್ತು ಮೆರವಣಿಗೆಗೆ ಪರವಾನಿಗೆ ನೀಡಲಿದ್ದಾರೆ ಎಂದು ಜಿಲ್ಲಾದಿಕಾರಿ ತಿಳಿಸಿದರು. ಪರವಾನಗೆ ಹೊಂದಿರುವ ಆಯುಧಗಳನ್ನು ಕೂಡಲೇ ಸಂಬಂಸಿದ ಪೊಲೀಸ್ ಠಾಣೆಯಲ್ಲಿ ಜಮಾ ಮಾಡಬೇಕು ಎಂದು ಹೇಳಿದರು.

ಚುನಾವಣಾ ಕರ್ತವ್ಯ ಕಡ್ಡಾಯ: ಚುನಾವಣೆಗೆ ನಿಯೋಜಿಸಲಾಗುವ ಅದಿಕಾರಿಗಳು ಹಾಗೂ ಸಿಬ್ಬಂದಿ ತಮಗೆ ನೀಡಲಾಗುವ ಕೆಲಸವನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಜಿಲ್ಲಾದಿಕಾರಿ ಹೇಳಿದರು. ಜನತಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸುವುದು ಕಡ್ಡಾಯ. ವಿಕಲಚೇತನರು, ಗರ್ಭಿಣಿಯರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರ ಮನವಿ ಪರಿಶೀಲಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಂತೆ ಅದಿಕಾರಿಗಳಿಗೆ ಸೂಚನೆ ನೀಡಿದರು.

ದಕ್ಷತೆಯಿಂದ ಕಾರ್ಯನಿರ್ವಹಿಸಿ: ಲೋಕೋಪಯೋಗಿ, ಅರಣ್ಯ ಸೇರಿದಂತೆ ಎಲ್ಲ ಇಲಾಖೆಯ ಪ್ರವಾಸಿಮಂದಿರ ಹಾಗೂ ನಿರೀಕ್ಷಣಾ ಮಂದಿರಗಳನ್ನು ಜಿಲ್ಲಾಡಳಿತದ ಸುಪರ್ದಿಗೆ ಪಡೆದುಕೊಳ್ಳಲಾಗುವುದು ಎಂದರು. ಎಲ್ಲ ಅದಿಕಾರಿಗಳು ಹಾಗೂ ಸಿಬ್ಬಂದಿ ಕಳೆದ ಚುನಾವಣೆ ರೀತಿಯಲ್ಲಿ ದಕ್ಷತೆಯಿಂದ ಕಾರ್ಯನಿರ್ಹಿಸುವ ಮೂಲಕ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.

ಉಪ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಅಪರ ಜಿಲ್ಲಾದಿಕಾರಿ ಅಶೋಕ ದುಡಗುಂಟಿ, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ರಮೇಶ ಕಳಸದ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅದಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...