More

    ಮಾರ್ಗಸೂಚಿ ದರ ಅನ್ವಯ ಆಸ್ತಿ ತೆರಿಗೆ ಹೆಚ್ಚಳಕ್ಕೆ ಜನಾಕ್ರೋಶ

    ಶಿವಮೊಗ್ಗ: ಮಾರ್ಗಸೂಚಿ ದರದ ಅನ್ವಯ ಆಸ್ತಿ ತೆರಿಗೆ ನಿಗದಿ ವಿರೋಧಿಸಿ ವಿವಿಧ ಸಂಘಟನೆಗಳು ಬುಧವಾರ ಮಹಾನಗರ ಪಾಲಿಕೆ ಹೊರಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ಕರೊನಾ ಸಂದರ್ಭದಲ್ಲಿ ಕೆಲವು ರಾಜ್ಯಗಳು ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ನೀಡಿದ್ದರೆ, ನಮ್ಮ ರಾಜ್ಯದಲ್ಲಿ ಮಾತ್ರ ಅವೈಜ್ಞಾನಿಕವಾಗಿ ತೆರಿಗೆ ಹೆಚ್ಚಿಸಲಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
    ಮಾರ್ಗಸೂಚಿ ದರದ ಮೇಲೆ ತೆರಿಗೆ ನಿಗದಿ ಮಾಡುವುದರಿಂದ ಪ್ರತಿ ವರ್ಷ ಇದು ಪರಿಷ್ಕರಣೆಯಾಗುತ್ತದೆ. ಅವೈಜ್ಞಾನಿಕ ನಿರ್ಧಾರದಿಂದ ತೆರಿಗೆ ದುಬಾರಿಯಾಗಲಿದೆ. ಇದೇ ವ್ಯವಸ್ಥೆ ಮುಂದುವರಿದರೆ ಭವಿಷ್ಯದಲ್ಲಿ ತೆರಿಗೆ ಪಾವತಿಗೆ ಆಸ್ತಿಯನ್ನೇ ಮಾರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಕರೊನಾ ಕಾರಣದಿಂದ ತೆರಿಗೆದಾರರು ಸಂಕಷ್ಟದಲ್ಲಿದ್ದಾರೆ ಎಂದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಗುಜರಾತ್‌ನಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಆದರೆ ನಮ್ಮಲ್ಲಿ ಅವೈಜ್ಞಾನಿಕವಾಗಿ ಹೆಚ್ಚಳ ಮಾಡಲಾಗಿದೆ. ಒಂದೊಂದು ರಸ್ತೆಯಲ್ಲಿ ಒಂದೊಂದು ತೆರಿಗೆ ನಿಗದಿಯಾಗಿದೆ. ಖಾಲಿ ನಿವೇಶನಗಳಿಗೂ ತೆರಿಗೆ ಏರಿಕೆಯಾಗಿದೆ. ತೆರಿಗೆ ನಿಗದಿಗೆ ಮಾರ್ಗಸೂಚಿ ದರದ ಮಾನದಂಡ ಅನುಸರಿಸಬಾರದು ಎಂದು ಒತ್ತಾಯಿಸಿದರು.
    ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಅಧ್ಯಕ್ಷ ಬಿ.ವಿ.ಗೋಪಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತ ಕುಮಾರ್, ಸಂಘಟನಾ ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ, ಅಣ್ಣಾ ಹಜಾರೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಯಾದವ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್, ಅಡಕೆ ವರ್ತಕರ ಸಂಘದ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts