More

    ಶ್ರೀರಂಗಪಟ್ಟಣದಲ್ಲಿ ಪೋಲಿಯೋ ಜಾಗೃತಿ

    ಶ್ರೀರಂಗಪಟ್ಟಣ: ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲು ಜನರಿಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಪುರಸಭೆ ಸದಸ್ಯ ಎಸ್.ನಂದಿಶ್ ಕರೆ ನೀಡಿದರು.

    ಪಟ್ಟಣದ ಸುಪ್ರಭಾತ ಶಿಕ್ಷಣ ಸಂಸ್ಥೆ ಹಾಗೂ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳೊಂದಿಗೆ ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ ಹಾಗೂ ಪುರಸಭೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಅರಿವು ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.

    ಮಾಹಿತಿ ಕೊರತೆಯಿಂದ ಸೂಕ್ತ ಕಾಲದಲ್ಲಿ ಪೋಲಿಯೊ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವಲ್ಲಿ ತಪ್ಪಿಸಿದರೆ, ಅದರಿಂದ ಉಂಟಾಗುವ ಪರಿಣಾಮ ಜೀವನದುದ್ದಕ್ಕೂ ಆ ಮಗುವಿಗೆ ಕಾಡುವಂತಾಗುತ್ತದೆ. ಆದರಿಂದ ಸರ್ಕಾರ ಈ ಬಗ್ಗೆ ಕ್ರಮವಹಿಸಿದ್ದು, ಇದರ ಸದುಪಯೋಗವಾಗಬೇಕು ಎಂದರು.
    ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಮಾತನಾಡಿ, ಕಳೆದ 25 ವರ್ಷಗಳಿಂದ ನಡೆಸಲಾಗುತ್ತಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಈ ಬಾರಿಯೂ ಮಾ.3ರಂದು ನಡೆಸಲಾಗುತ್ತಿದ್ದು, ತಪ್ಪದೇ 5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೋಲಿಯೋ ಕೇಂದ್ರಕ್ಕೆ ಕರೆ ತಂದು ಲಸಿಕೆ ಹಾಕಿಸಬೇಕೆಂದು ತಿಳಿಸಿದರು.

    ಬಳಿಕ ಶಾಲಾ ವಿದ್ಯಾರ್ಥಿಗಳ ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಜತೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

    ಶಿಕ್ಷಕರಾದ ಕೇಶವಮೂರ್ತಿ, ವಾಣಿಶ್ರೀ, ರಚನಾ, ಸ್ವಾಮಿಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ. ಮಂಗಳಾ, ಆಶಾ ಕಾರ್ಯಕರ್ತೆಯರಾದ ಮೀನಾ, ಅಶ್ವಿನಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts