More

    ಬೆಳಗಾವಿ: ಪೋಲಿಯೋ ಅಭಿಯಾನಕ್ಕೆ ಸಿದ್ಧತೆ

    ಬೆಳಗಾವಿ: ಪೋಲಿಯೋ ನೀಡುವ ವೇಳೆ ಕಳೆದ ಬಾರಿ ಎಕ್ಸ್ ಎಂದು ಗುರುತಿಸಲಾಗಿರುವ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಲಸಿಕೆ ಹಾಕಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಸೂಚಿಸಿದ್ದಾರೆ.

    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ ಪೋಲಿಯೋ ನೀಡಲು ವಾಹನ ಸೌಲಭ್ಯ ಒದಗಿಸಲು ಸಂಬಂಧಿಸಿದ ಕಾರ್ಖಾನೆ ಅಧಿಕಾರಿಗಳಿಗೆ ಇಲಾಖೆ ಅಧಿಕಾರಿಗಳು ಸೂಚಿಸಬೇಕು. ಶಾಲಾ ಮಟ್ಟದಲ್ಲಿ ಪೋಲಿಯೋ ಜಾಗೃತಿ ಮೂಡಿಸಲು ಬಿಇಒಗಳಿಗೆ ಡಿಡಿಪಿಐ ನಿರ್ದೇಶನ ನೀಡಬೇಕು. ಲಸಿಕೆ ಸಂಗ್ರಹ ಮಾಡುವ ಸ್ಥಳಕ್ಕೆ ನಿರಂತರ ವಿದ್ಯುತ್ ಕಲ್ಪಿಸಲು ಹೆಸ್ಕಾಂ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಡಿಸಿ ಸೂಚಿಸಿದರು.

    ಜಿಲ್ಲಾ ತಾಯಿ-ಮಕ್ಕಳ ಆರೋಗ್ಯ ಅಧಿಕಾರಿ ಡಾ. ಐ.ಪಿ. ಗಡಾದ ಮಾತನಾಡಿ, 20 ವರ್ಷದಿಂದ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ದೇಶಾದ್ಯಂತ ಜ. 19ರಂದು ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

    ಪೋಲಿಯೋದಿಂದ ವಂಚಿತರಾದ ಮಕ್ಕಳಿಗೆ ಜ. 20ರಿಂದ 22ರ ವರೆಗೆ ಆರೋಗ್ಯ ಇಲಾಖೆಯಿಂದ ಮನೆ-ಮನೆಗೆ ತೆರಳಿ ಆಶಾ, ಅಂಗನವಾಡಿ ಕಾರ್ಯಕರ್ತಯರು ಲಸಿಕೆ ಹಾಕಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 2,335 ಪೋಲಿಯೋ ಬೂತ್ ಸ್ಥಾಪಿಸಲಾಗುವುದು. 36 ಮೊಬೈಲ್ ತಂಡ ಹಾಗೂ ರೈಲು ಮತ್ತು ಬಸ್ ನಿಲ್ದಾಣದಲ್ಲಿ ಪೋಲಿಯೋ ಲಸಿಕೆ ಕೇಂದ್ರ ಆರಂಭಿಸಲಾಗುವುದು. 9,954 ಕಾರ್ಯಕರ್ತೆಯರು ಹಾಗೂ 199 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ವಿ. ಮುನ್ಯಾಳ ಇದ್ದರು.

    ನಾಮಫಲಕ ಅಳವಡಿಸಲು ಸೂಚಿಸಿ

    ಜಿಲ್ಲೆಯ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನ ಮಾರಾಟವಾಗದಂತೆ ಕ್ರಮ ವಹಿಸಬೇಕು. ಕೋಟ್ಪಾ-2003ರ ಕಾಯ್ದೆಯ ಪ್ರಕಾರ ಕಾಲೇಜು ಆವರಣದ ಮುಖ್ಯದ್ವಾರದ ಬಳಿ ನಾಮಫಲಕ ಅಳವಡಿಸಲು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts