More

    17ರಿಂದ ರಾಷ್ಟ್ರೀಯ ಪೋಲಿಯೋ ಲಸಿಕೆ ಅಭಿಯಾನ : ಡಿಸಿ ರಾಕೇಶ್‌ಕುಮಾರ್ ಮಾಹಿತಿ

    ತುಮಕೂರು : ಜ.17ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆಯಲ್ಲಿ 5 ವರ್ಷದೊಳಗಿನ 2,11,330 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕರೊನಾ ಮಾರ್ಗಸೂಚಿ ಅನುಸರಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಲಸಿಕೆ ಗುಣಮಟ್ಟ ಕಾಪಾಡಲು ಜ.10 ರಿಂದ 20ರ ವರೆಗೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಬೆಸ್ಕಾಂ ಅಧಿಕಾರಿಗೆ ನಿರ್ದೇಶನ ನೀಡಿದರು.

    ಭಾನುವಾರ ಸಹ ಶಾಲೆಗಳನ್ನು ತೆರೆದು ಕಾರ್ಯಕ್ರಮ ಕುರಿತು ಶಾಲಾ ಮಕ್ಕಳಿಂದ ಜಾಥಾ ಹಮ್ಮಿಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದ ಡಿಸಿ, ಅಂಗನವಾಡಿ ಕೇಂದ್ರಗಳಲ್ಲಿಯೂ ಲಸಿಕಾ ಕೇಂದ್ರ ತೆರೆಯಬೇಕು, ಮನೆ-ಮನೆಗೆ ಐಇಸಿ ಕರಪತ್ರ, ಭಿತ್ತಿಪತ್ರಗಳ ವಿತರಣೆ, ಪೋಲಿಯೋ ಹನಿ ಹಾಕಿಸುವ ಬಗ್ಗೆ ಪಾಲಕರಿಗೆ ಅರಿವು ಮೂಡಿಸಲು ಕಾರ್ಯಕರ್ತೆಯರನ್ನು ನಿಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ಎಸ್.ನಟರಾಜುಗೆ ನಿರ್ದೇಶಿಸಿದರು.

    ಲಸಿಕೆ ಹಾಕುವವರಿಗೆ ಊಟದ ವ್ಯವಸ್ಥೆ ಹಾಗೂ ಸ್ಥಳೀಯ ಸಾರಿಗೆ ವ್ಯವಸ್ಥೆ, ಪ್ರಚಾರ ಸಾಮಗ್ರಿಗಳ ವಿತರಣೆ ಹಾಗೂ ಪ್ರದರ್ಶನ ವ್ಯವಸ್ಥೆ, ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ರೋಟರಿ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಮನವಿ ಮಾಡಿದರು.

    ಲಸಿಕಾ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ 1,225 ಕೇಂದ್ರ(ಲಸಿಕಾ ಬೂತ್) ಹಾಗೂ 67 ಟ್ರಾನ್ಸಿಟ್ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕೆ ನೀಡಲು 221 ವಾಹನಗಳ ಬಳಕೆ, 5070 ಆರೋಗ್ಯ ಸಿಬ್ಬಂದಿ ಹಾಗೂ ಮೇಲ್ವಿಚಾರಣೆಗಾಗಿ 276 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಆರ್‌ಸಿಎಚ್ ಅಧಿಕಾರಿ ಡಾ.ಕೇಶವರಾಜ್ ಸಭೆಗೆ ಮಾಹಿತಿ ನೀಡಿದರು.
    ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್, ಡಾ.ಮೋಹನ್‌ದಾಸ್, ಡಾ.ಚೇತನ್, ಡಾ.ಮಹಿಮಾ, ಡಾ.ಪುರುಷೋತ್ತಮ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts