More

    ಮೊದಲ ದಿನ ಶೇ.96 ಗುರಿ ಸಾಧನೆ

    ಚಿಕ್ಕಮಗಳೂರು: ಜಿಲ್ಲಾದ್ಯಂತ ಭಾನುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಶೇ.96,26 ಗುರಿ ಸಾಧಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಕೆ.ಪ್ರಭು ತಿಳಿಸಿದ್ದಾರೆ.

    ಒಟ್ಟು 84,978 ಮಕ್ಕಳ ಗುರಿಯಲ್ಲಿ 81,803 ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗಿದೆ. ಜ.21ರವರೆಗೆ ಇನ್ನೂ ಎರಡು ದಿನಗಳ ಕಾಲ ಪೋಲಿಯೋ ಹನಿ ಹಾಕುವ ಕಾರ್ಯಕ್ರಮ ನಡೆಯಲಿದ್ದು, ಈ ಎರಡು ದಿನ ಮನೆ ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುವುದು. ಜತೆಗೆ ವಲಸಿಗರನ್ನು ಗುರುತಿಸಿ ಅವರ ಮಕ್ಕಳಿಗೂ ಲಸಿಕೆ ಹಾಕಲಾಗುವುದು. ಕಳೆದ ವರ್ಷ ಮೊದಲ ದಿನ ಶೇ.92 ರಷ್ಟು ಮಾತ್ರ ಗುರಿ ಸಾಧಿಸಿದ್ದು, ಈ ವರ್ಷಕ್ಕೆ ಹೋಲಿಸಿದರೆ ಶೇ.4.26 ರಷ್ಟು ಪ್ರಗತಿಯಾಗಿದೆ ಎಂದು ಮಾಹಿತಿ ನೀಡಿದರು.

    ನಗರದ ಹೆರಿಗೆ ಆಸ್ಪತ್ರೆಯಲ್ಲಿ ಬೆಳಗ್ಗೆ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

    ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್​ಕುಮಾರ್ ಮಾತನಾಡಿ, ಎಲ್ಲ ಮಕ್ಕಳ ಆರೋಗ್ಯ ಬಹಳ ಮುಖ್ಯ. ಪ್ರಾರಂಭದಿಂದಲೇ ಪಾಲಕರು ಮಕ್ಕಳಿಗೆ ಲಸಿಕೆ ಹಾಕಿಸಬೇಕು. ವೈದ್ಯಕೀಯ ವಿಭಾಗ, ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

    ಪೋಲಿಯೋ ಮುಕ್ತ ದೇಶಕ್ಕಾಗಿ ದೇಶದೆಲ್ಲೆಡೆ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಂದು ಮಗುವಿಗೂ ಪಾಲಕರು ಪೋಲಿಯೊ ಹನಿ ಹಾಕಿಸಬೇಕು ಎಂದು ತಾಪಂ ಅಧ್ಯಕ್ಷ ನೆಟ್ಟೇಕೆರೆಹಳ್ಳಿ ಜಯಣ್ಣ ಹೇಳಿದರು.

    ಆಸ್ಪತ್ರೆಯಲ್ಲಿದ್ದ ಹಸುಗೂಸುಗಳು ಹಾಗೂ ಆಸ್ಪತ್ರೆಯ ಸುತ್ತಮುತ್ತಲಿದ್ದ ಮಕ್ಕಳು ಸಾಲಿನಲ್ಲಿ ಬಂದು ಪೋಲಿಯೋ ಹನಿ ಹಾಕಿಸಿಕೊಂಡರು. ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಡಿಎಚ್​ಒ ಡಾ. ಎಸ್.ಕೆ.ಪ್ರಭು, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ, ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ರೋಟರಿ ಅಧ್ಯಕ್ಷ ಗೌತಮ್ ಚಂದ್, ವಿವಿಧ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts