More

    ನೂತನ ಕಾಂಗ್ರೆಸ್​ ಸರ್ಕಾರಕ್ಕೆ ಟ್ವೀಟ್​ ಮೂಲಕ ಶುಭ ಹಾರೈಸಿದ ಗಣ್ಯರು

    ಬೆಂಗಳೂರು:  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

    ಇನ್ನು ನೂತನ ಸರ್ಕಾರ ರಚನೆ ಬೆನ್ನಲ್ಲೇ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಸವರಾಜ್​ ಬೊಮ್ಮಾಯಿ, ಎಚ್​.ಡಿ. ಕುಮಾರಸ್ವಾಮಿ, ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದ್ಧಾರೆ.

    ನನ್ನ ಶುಭ ಹಾರೈಕೆಗಳು

    ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಕನ್ನಡದಲ್ಲಿ ಟ್ವೀಟ್​ ಮಾಡುವ ಮೂಲಕ ಪ್ರಧಾನಿ ಮೋದಿ ಶುಭ ಹಾರೈಸಿದ್ಧಾರೆ.

    ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಶುಭ ಹಾರೈಸಿದ್ದಾರೆ.

    ಪರಿಪೂರ್ಣ ಬೆಂಬಲ ಇದೆ

    ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್​ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್​ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು.

    ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್​ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಟ್ವೀಟ್​ ಮಾಡುವ ಮೂಲಕ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಶುಭ ಹಾರೈಸಿದ್ಧಾರೆ.

    ಹೊಸ ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ

    ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ ಅವರಿಗೆ ನನ್ನ ಅಭಿನಂದನೆಗಳು.

    ಈ ಜೋಡಿಯೂ ತಮ್ಮ ಸಮರ್ಥ ಆಡಳಿತದಿಂದ ಕರ್ನಾಟಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ ಎಂದು ನಾನು ನಂಬಿದ್ದೇನೆ. ದಕ್ಷಿಣದಲ್ಲಿ ಶುರುವಾದ ಅರುಣೋದಯವು ಭಾರತದಾದ್ಯಂತ ಹರಡಬೇಕು.

    ಶನಿವಾರ ಬೆಂಗಳೂರಿನಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮವು ಬದಲಾವಣೆಯ ಘಂಟಘೋಷವಾಗಿದೆ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್​ ಟ್ವೀಟ್​ ಮಾಡಿ ನೂತನ ಸರ್ಕಾರಕ್ಕೆ ಶುಭ ಹಾರೈಸಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts