ಪ್ರತಿಯೊಬ್ಬರು ಮಾದರಿ ನೀತಿ ಸಂಹಿತೆ ಪಾಲಿಸಿ

ಬೀದರ್ : ಜಿಲ್ಲಾಧಿಕಾರಿ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ ಮತ್ತು ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಸಭೆ ನಡೆಸಿದರು. ಮಾದರಿ ನೀತಿ ಸಂಹಿತೆ ಪಾಲನೆ, ಪೂರ್ವಾನುಮತಿ ಪಡೆದು ಕಾರ್ಯಚಟುವಟಿಕೆ ನಡೆಸುವುದು, ನೀತಿ ಸಂಹಿತೆ ಉಲ್ಲಂಘನೆ ಮಾಡದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ತಿಳಿಸಿಕೊಡಲಾಯಿತು.

ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ. ಎಚ್.ಆರ್.ಮಹಾದೇವ ಮಾತನಾಡಿ, ಅಭ್ಯರ್ಥಿಗಳು ಪ್ರಚಾರ ಸಾಮಗ್ರಿ ಮುದ್ರಣಕ್ಕಾಗಿ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಳ್ಳಲು ಪೂವರ್ಾನುಮತಿ ಪಡೆದುಕೊಳ್ಳುವುದು ಕಡ್ಡಾಯ. ತಾವು ಅನುಮತಿ ಪಡೆದು, ಅದನ್ನು ಇತರರಿಗೆ ಬಳಸಲು ಅವಕಾಶ ನೀಡಬಾರದು ಎಂದು ತಿಳಿಸಿದರು.

ಜಿಪಂ ಸಿಇಒ ಮಹಾಂತೇಶ ಬೀಳಗಿ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದನ್ವಯ ರಾಜಕೀಯ ಪಕ್ಷಗಳು ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮ ನಡೆಸಲು ಮತ್ತು ವಾಹನ ಬಳಸಲು ಅನುಮತಿ ಪಡೆಯಲೇಬೇಕು. ಅನುಮತಿ ಇಲ್ಲದೇ ಯಾವುದೇ ಕಾರ್ಯಕ್ರಮ ನಡೆಸವಂತಿಲ್ಲ. ಪ್ರಚಾರಕ್ಕೆ ಬಳಸುವ ಸಾಮಗ್ರಿಗಳಿಗೂ ಅನುಮತಿ ಅಗತ್ಯ ಎಂದು ಹೇಳಿದರು.

ಚುನಾವಣಾ ವೆಚ್ಚದ ನೋಡಲ್ ಅಧಿಕಾರಿಯಾದ ಜಿಲ್ಲಾ ಖಜಾನೆ ಅಧಿಕಾರಿ ಅಶೋಕ ವಡಗಾಂವೆ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಅಭ್ಯಥರ್ಿಗಳು ಮಾಡುವ ವೆಚ್ಚಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಆದ್ದರಿಂದ ವೆಚ್ಚಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ರಮೇಶ ಮಠಪತಿ ಅವರು ಮಾಹಿತಿ ನೀಡಿದರು. ಚುನಾವಣಾ ಸಾಮಾನ್ಯ ವೀಕ್ಷಕ ಸವೀನ್ ಬನ್ಸಾಲ್, ಅಪರ ಡಿಸಿ ರುದ್ರೇಶ ಗಾಳಿ ಇತರರಿದ್ದರು

Leave a Reply

Your email address will not be published. Required fields are marked *