More

    ಕಾಂಗ್ರೆಸ್ ಹೇಳಿಕೆಗಳಿಂದಲೇ ರಾಜಕೀಯ ಲೇಪ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಕರಣಗೊಳಿಸಿಲ್ಲ. ಕಾಂಗ್ರೆಸ್ ಮುಖಂಡರ ಹೇಳಿಕೆಗಳಿಂದಲೇ ಈ ಪ್ರಕರಣಕ್ಕೆ ರಾಜಕೀಯ ಲೇಪ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಇಲ್ಲಿಯ ಬಿಡನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಶುಕ್ರವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದೊಡ್ಡ ಅಘಾತಕಾರಿ ಘಟನೆ ನಡೆದಾಗ ಬಿಜೆಪಿಯವರು ಸುಮ್ಮನೆ ಕುಳಿತುಕೊಳ್ಳಬೇಕೆಂದು ನೀವು (ಕಾಂಗ್ರೆಸ್) ನಿರೀಕ್ಷೆ ಮಾಡುತ್ತೀರಾ? ನಾವಷ್ಟೇ ಅಲ್ಲ, ಹಲವು ಮಠಾಧೀಶರು, ಗಣ್ಯರು, ಅಸಂಖ್ಯಾತ ಸಾರ್ವಜನಿಕರು ಈ ಘಟನೆಯನ್ನು ಖಂಡಿಸಿದ್ದಾರೆ. ಅದರರ್ಥ ಅವರೆಲ್ಲ ರಾಜಕೀಯ ಮಾಡುತ್ತಿದ್ದಾರೆ ಎಂದು ಭಾವಿಸುತ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

    ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಆಡಳಿತ ಪಕ್ಷದವರು ಆಕಸ್ಮಿಕ, ವೈಯಕ್ತಿಕ ಎಂದೆಲ್ಲ ಹೇಳಿ ದಾರಿ ತಪ್ಪಿಸುವ ಪ್ರಯತ್ನ ಮಾಡಿದರು. ಹತ್ಯೆ ಹಿಂದೆ ಫಯಾಜ್ ಒಬ್ಬನೇ ಇಲ್ಲ. ನಾಲ್ವರು ಇದ್ದಾರೆ ಎಂದು ನೇಹಾಳ ತಂದೆ, ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಹೇಳಿದ್ದಾರೆ. ಅವರು ಆ ನಾಲ್ವರ ಹೆಸರನ್ನು ಪೊಲೀಸರಿಗೆ ಹೇಳಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಅಪರಾಧಿಗಳನ್ನು ರಕ್ಷಣೆ ಮಾಡುತ್ತಿಲ್ಲ ಎಂದಾದರೆ ಸಿಬಿಐಗೆ ವಹಿಸಲು ಹಿಂದೇಟು ಹಾಕಬಾರದು ಎಂದು ಹೇಳಿದರು.

    ಈ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಕೈ ತೊಳೆದುಕೊಂಡಿದೆ. ಹತ್ಯೆ ನಡೆದ ದಿನ ಹಂತಕನನ್ನು ಬಂಧಿಸಿದ ಪೊಲೀಸರು ವಿಚಾರಣೆಗಾಗಿ ಆತನನ್ನು ಪೊಲೀಸ್ ಕಸ್ಟಡಿ ಕೇಳಲಿಲ್ಲ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ನನಗೆ ಆಶ್ಚರ್ಯ ತಂದಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts