More

    ಚುನಾವಣಾ‌ ನೀತಿ ಸಂಹಿತೆ ಜಾರಿ ಹಿನ್ನೆಲೆ ತಪಾಸಣೆ; ಎಟಿಎಂಗೆ ಹಣ ಕೊಂಡೊಯ್ಯುತ್ತಿದ್ದ ವಾಹನದಲ್ಲಿತ್ತು 10 ಲಕ್ಷ ರೂ. ಹೆಚ್ಚುವರಿ ಹಣ!

    ಆನೇಕಲ್: ಚುನಾವಣಾ ಸಮಯ ಸಮೀಪಿಸುತ್ತಿದ್ದಂತೆ ಮತದಾರರಿಗೆ ಆಮೀಷವೊಡ್ಡಲು ಅಕ್ರಮವಾಗಿ ತಂದಿರುವ ಹಣ, ಸೀರೆ, ಗೃಹಬಳಕೆ ವಸ್ತುಗಳ ಒಂದೊಂದಾಗಿ ಪತ್ತೆಯಾಗುತ್ತಿವೆ. ಅಕ್ರಮ ತಡೆಯಲು ಚುನಾವಣಾ ಆಯೋಗವು ಹದ್ದಿನ ಕಣ್ಣಿಟ್ಟಿದೆ. ಹೀಗಿದ್ದರೂ ರಾಜಕೀಯ ಪಕ್ಷಗಳ ನಾಯಕರು ಹಣ, ಉಡುಗೊರೆ ಹಂಚಲು ಮುಂದಾಗಿದ್ದಾರೆ.

    ಕಳೆದ ಎರಡು ವಾರಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಪೊಲೀಸರು ಹಣ, ಮದ್ಯ, ಸೀರೆ ಮುಂತಾದ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಲೇ ಇದ್ದಾರೆ. ಇದೀಗ ಎಟಿಎಂಗೆ ಹಣ ತುಂಬಲು ಕೊಂಡೊಯ್ಯುವ ವಾಹನದಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

    ಇದನ್ನೂ ಓದಿ: ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ!

    ಹೆಬ್ಬಗೋಡಿ ಪೊಲೀಸರು ಕಾರ್ಯಚರಣೆ ನಡೆಸಿ, ಎಟಿಎಂ ಯಂತ್ರಕ್ಕೆ ಹಣ ತುಂಬುವ 3 ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಚುನಾವಣಾ‌ ನೀತಿ ಸಂಹಿತೆ ಜಾರಿ ಹಿನ್ನೆಲೆ ವಾಹನ‌ ಪರಿಶೀಲನೆ ಮಾಡುವ ವೇಳೆ ಹೆಚ್ಚುವರಿ ಹಣ ಪತ್ತೆಯಾಗಿದೆ. ಹಣದ ಕುರಿತು ದಾಖಲೆ ಕೇಳಲಾಗಿತ್ತು. ಈ ವೇಳೆ ಸಿಬ್ಬಂದಿ ಹೇಳಿದ ಲೆಕ್ಕಕ್ಕೂ, ಹಣಕ್ಕೂ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

    ಮೂರು ವಾಹನದ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಸಿಕ್ಕಿದೆ. ರೈಟರ್ಸ್ ಕಂಪನಿಯ ವಾಹನದಲ್ಲಿ 10‌ ಲಕ್ಷ ರೂಪಾಯಿ ಹೆಚ್ಚುವರಿ ಹಣ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇದನ್ನೂ ಓದಿ: ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts