More

    ರಾಜಕೀಯ ಬೇಳೆ ಬೇಯಿಸಲು ಕಾಂಗ್ರೆಸ್ ಪ್ರತಿಭಟನೆ: ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ.ವೇಣುಗೋಪಾಲ್ ಟೀಕೆ

    ಕೋಲಾರ :  ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಇನ್ನಿತರ ಅಗತ್ಯ ಪದಾರ್ಥಗಳ ದರ ಹೆಚ್ಚಳದಿಂದ ಜನ ಸಾವಾನ್ಯರಿಗೆ ಆಗಿರುವ ತೊಂದರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುವಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ತಿಳಿಸಿದರು.

    ಪ್ರಧಾನಿ ಮೋದಿ ಅವರ 71ನೇ ಹುಟ್ಟುಹಬ್ಬದ ಅಂಗವಾಗಿ ಪಕ್ಷದಿಂದ ಸೆ.16ರಿಂದ ಅ.7ರವರೆಗೆ ಹಮ್ಮಿಕೊಂಡಿರುವ ಸೇವಾ ಸಮರ್ಪಣಾ ಸಪ್ತಾಹದ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ವಾತನಾಡಿ, ತೈಲ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ, ಈ ಹಿಂದೆ ಕಾಂಗ್ರೆಸ್ ಆಳ್ವಿಕೆ ಕಾಲದಲ್ಲೂ ಬೆಲೆ ಏರಿಕೆಯಾಗಿತ್ತು, ಆಗ ವಿರೋಧಿಸದ ವಿರೋಧ ಪಕ್ಷಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರತಿಭಟಿಸುತ್ತಿವೆ ಎಂದರು.

    ಮೋದಿ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ವರಿಷ್ಠರ ಕರೆಯ ಮೇರೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಪ್ರತಿ ಗ್ರಾಪಂ ಹಾಗೂ ಮಂಡಲವಾರು ಹಮ್ಮಿಕೊಳ್ಳಲಾಗಿದೆ, ಜಿಲ್ಲೆಯ ನಿರುದ್ಯೋಗಿ ಯುವಕರ ಸಲುವಾಗಿ ಉದ್ಯೋಗ ಮೇಳ ಆಯೋಜಿಸಲಾಗುವುದು, ಜಿಲ್ಲೆಯ ಅಭಿವದ್ಧಿಗೆ ಒತ್ತು ನೀಡುವ ಸಲುವಾಗಿ ಮತ್ತು ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಮಂಜೂರು ವಾಡಿಸಲು ನಮ್ಮ ಸಂಸದರು, ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಎಂಎಲ್‌ಸಿಗಳ ಮೂಲಕ ಒತ್ತಡ ಹೇರಲಾಗುವುದು ಎಂದರು.

    ಪಕ್ಷದ ತೀರ್ವಾನದಂತೆ ಸೆ.16ರಿಂದ ಅ.7ರವರೆಗೆ ರಕ್ತದಾನ, ಪರಿಸರ ಸಂರಕ್ಷಣೆ, ಬೂತ್‌ಮಟ್ಟದಲ್ಲಿ ಕೇಂದ್ರ ಸರ್ಕಾರದ 7 ವರ್ಷಗಳ ಸಾಧನೆ ಬಗ್ಗೆ ಅಭಿಯಾನ ಸೇರಿ ಇನ್ನಿತರ ಜನಪರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲಾ ವಾಧ್ಯಮ ಪ್ರಮುಖ್ ಹಾಗೂ ಕೋರ್ ಕಮಿಟಿ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ, ಮೋದಿ ಹುಟ್ಟುಹಬ್ಬದ ಅಂಗವಾಗಿ ರೂಪಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಸದಸ್ಯ ವಿಜಯಕುವಾರ್, ಶ್ರೀನಿವಾಸಪುರ ತಾಲೂಕು ಬಿಜೆಪಿ ಅಧ್ಯಕ್ಷ ಅಶೋಕರೆಡ್ಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts