More

    ಅಂಬೇಡ್ಕರ್ ಆಶಯಗಳಿಗೆ ಅನುಗುಣವಾಗಿ ರಾಜಕಾರಣ

    ಮೈಸೂರು: ವಿ.ಶ್ರೀನಿವಾಸಪ್ರಸಾದ್ ಅವರು ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯಗಳಿಗೆ ಅನುಗುಣವಾಗಿ ರಾಜಕಾರಣ ಮಾಡಿದರು ಎಂದು ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.


    ಗಾಂಧಿನಗರದ ಉರಿಲಿಂಗಿಪೆದ್ದಿ ಮಠದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ವಿ.ಶ್ರೀನಿವಾಸಪ್ರಸಾದ್ ಅವರ ಭಾವನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.


    ಬಿ.ಬಸವಲಿಂಗಪ್ಪ ಅವರ ಬೂಸಾ ಪ್ರಕರಣದ ಹೋರಾಟದ ಮೂಲಕ ಸಾರ್ವಜನಿಕ ಜೀವನಕ್ಕೆ ಬಂದ ಪ್ರಸಾದ್ ಅವರು ಕೊನೆಯವರೆಗೂ ತಾವು ನಂಬಿದ್ದ ತತ್ವ, ಸಿದ್ಧಾಂತಗಳ ಪರ ಹೋರಾಟ ನಡೆಸಿದರು. ಪಕ್ಷಾಂತರಿಯಾಗಿದ್ದರೇ ಹೊರತು ತತ್ವಾಂತರಿಯಾಗಿರಲಿಲ್ಲ ಎಂದರು.


    ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆ ಇದ್ದ ಶ್ರೀನಿವಾಸಪ್ರಸಾದ್ ಅವರು 50 ವರ್ಷಗಳ ಸಕ್ರಿಯ ರಾಜಕಾರಣದಲ್ಲಿ ಗಟ್ಟಿ ನಾಯಕರಾಗಿ ರೂಪುಗೊಂಡಿದ್ದರು. ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ ಎಂದರೆ ಯಾರದನ್ನಾದರೂ ಎದುರು ಹಾಕಿಕೊಳ್ಳುತ್ತಿದ್ದರು. ಸಂವಿಧಾನ ತಿದ್ದುಪಡಿಯ ವಿಷಯದಲ್ಲಿ ತಾವು ಸಂಸದರಾಗಿದ್ದ ಬಿಜೆಪಿಯ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದರು ಎಂದರು.


    ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಮೇಯರ್ ಪುರುಷೋತ್ತಮ, ಮೈವಿವಿ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಜೆ.ಸೋಮಶೇಖರ್, ಪತ್ರಕರ್ತ ಕೆ.ಶಿವಕುಮಾರ್, ಮುಖಂಡರಾದ ಅಹಿಂದ ಜವರಪ್ಪ, ಸಿ.ಜಿ.ಶಿವಕುಮಾರ್, ಸಿದ್ದಪ್ಪ, ರಾಮಸ್ವಾಮಿ, ಚಾ.ನಂಜುಂಡಮೂರ್ತಿ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts