More

    ಘರ್ ವಾಪ್ಸಿ ಯಶಸ್ವಿ: ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ಸೇರ್ಪಡೆ!

    ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಲಿಂಗಾಯತ ನಾಯಕ ಜಗದೀಶ್ ಶೆಟ್ಟರ್ ಅವರು ಇಂದು ಗುರುವಾರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರು ಇಂದು ಬಿಎಸ್ ಯಡಿಯೂರಪ್ಪ ಅವರೊಂದಿಗೆ ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಗೆ ತೆರಳಿದ್ದ ಸುದ್ದಿ ವರದಿಯಾಗಿತ್ತು. ಇದೀಗ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.

    ಶೆಟ್ಟರ್ ಅವರಿಗೆ ಏಪ್ರಿಲ್ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರು. ಪ್ರಸ್ತುತ ಅವರು ಕರ್ನಾಟಕದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ.

    ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿ ಪಾಳಯದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಅವರು ಪಕ್ಷದಿಂದ ಹೊರ ನಡೆದಿದ್ದರು. ಆ ನಂತರ ಅವರೊಂದಿಗೆ ಹೊರನಡೆದ ಪ್ರಮುಖರಲ್ಲಿ ಶೆಟ್ಟರ್ ಕೂಡ ಒಬ್ಬರು.

    ಈ ತಿಂಗಳ ಆರಂಭದಲ್ಲಿ, ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳನ್ನು ನಿರಾಕರಿಸಲಾಗಿತ್ತು. ಆದರೆ ಇಂದು ದೆಹಲಿಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಜೊತೆ ದೆಹಲಿಗೆ ತೆರಳಿದ ಶೆಟ್ಟರ್ ಪುನಃ ಬಿಜೆಪಿಗೆ ಸೇರಿದ್ದಾರೆ.

    ಜಗದೀಶ್ ಶೆಟ್ಟರ್ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಘರ್ ವಾಪ್ಸಿ ಆಗುವ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಅಮಿತ್ ಶಾ ಅವರನ್ನು ಭೇಟಿಯಾದ ಶೆಟ್ಟರ್ ಸುದೀರ್ಘವಾಗಿ ಚರ್ಚೆ ನಡೆಸಿದರು. ಬಿಜೆಪಿ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಹೇಳಿದ್ದಾರೆ.

    ಲೋಕಸಭೆ ಚುನಾವಣೆ; ಶೆಟ್ಟರ್​ರನ್ನು ಬಿಜೆಪಿಗೆ ವಾಪಸ್​ ಕರೆತರಲು ಮುಂದಾದ ನಾಯಕರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts